ವಿಜಯಪುರ : ಜಿಲ್ಲೆಯ ಇಂಡಿ ಹಾಗೂ ಸಿಂದಗಿ ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 400ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಾಗೂ ಆಣೆಕಟ್ಟಿಯಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದಾಗಿ ಭೀಮಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. 

ಈ ಹಿನ್ನೆಲೆಯಲ್ಲಿ ಸೊನ್ನಾ ಬ್ಯಾರೇಜ್ ನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ಅಪಾಯ ಸಂಭವಿಸಬಹುದು ಎಂಬ ಕಾರಣದಿಂದ ಎನ್ ಡಿಆರ್ ಎಫ್ ನೆರವು ಪಡೆಯಲಾಗಿತ್ತು. ಆದರೆ, ಈ ಪಡೆ ಜನರ ಪ್ರಾಣ ರಕ್ಷಿಸಲು ಸಾಕಷ್ಟು ಶ್ರಮ ವಹಿಸುತ್ತಿದೆ.

ಪ್ರವಾಹದಿಂದಾಗಿ ಸಿಂಧಗಿ ತಾಲೂಕಿನಲ್ಲಿ 10, ಇಂಡಿಯಲ್ಲಿ 5 ಹಾಗೂ ಚಡಣಚ ತಾಲೂಕಿನ 3 ಹಳ್ಳಿಗಳು ಸಂಕಷ್ಟದಲ್ಲಿದ್ದವು. ಎನ್ ಡಿಆರ್ ಎಫ್ ಪಡೆಗಳು ಧಾವಿಸಿ, ಜನರನ್ನು ಸ್ಥಳಾಂತರ ಮಾಡಿದೆ. ಈ ಪಡೆ ಜಿಲ್ಲೆಯ 401 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಈಗಾಗಲೇ 1,861 ಜನರಿಗೆ ಪರಿಹಾರ ಕೇಂದ್ರಗಳಲ್ಲಿ ವಸತಿ ಕಲ್ಪಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.  

Leave a Reply

Your email address will not be published. Required fields are marked *

You May Also Like

ಕೊರೊನಾಕ್ಕೆ ಹೆದರಿ ಆತ್ಮಹತ್ಯೆ – ವರದಿ ನೆಗೆಟಿವ್!

ಬೀದರ್ : ತನಗೆ ಕೊರೊನಾ ವೈರಸ್ ಬಂದಿದೆ ಎಂದು ಆತಂಕಗೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ಆತನ ಕೊರೊನಾ ವರದಿ ಮಾತ್ರ ನೆಗೆಟಿವ್ ಬಂದಿದೆ.

ಕೃಷಿ ಅಧಿಕಾರಿಗಳು ಸಹ ಕೊರೊನಾ ವಾರಿಯರ್ಸ್‌ಗಳಂತೆ: ಬಿ.ಸಿ.ಪಾಟೀಲ

ಬೆಂಗಳೂರು: ರೈತರು ಕೋವಿಡ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ ಕೃಷಿ ಅಧಿಕಾರಿಗಳು ಸಹ ಕೊರೊನಾ…

ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಜನ್ಮದಿನಾಚರಣೆ ಮಾಡಿದ ಸರ್ಕಾರಿ ಅಧಿಕಾರಿ

ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಸಾವಳಗಿಯಲ್ಲಿ ಕೋವಿಡ್-೧೯ ಸಂದರ್ಭದಲ್ಲಿ ಸರಕಾರಿ ಆದೇಶ ಪ್ರಕಾರ ಜನ ಸಾಮಾನ್ಯರಾಗಲಿ ಹಾಗೂ…

ಕಸಾಪ ವತಿಯಿಂದ ಕವಿ-ಬರಹಗಾರರ ಪ್ರೋತ್ಸಾಹ ವೇದಿಕೆ

ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ತಾಲ್ಲೂಕಿಗೆ ಒಳಪಡುವ ಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಬರಹಗಾರರ ಸೃಜನಶೀಲತೆಯನ್ನು ಹೆಚ್ಚಿಸಲು ತಾಲ್ಲೂಕ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಘನಮಠದಯ್ಯಸ್ವಾಮಿ ಸಾಲಿಮಠ ತಿಳಿಸಿದ್ದಾರೆ.