ಕಲಬುರಗಿ : ಮಳೆ ಹಾಗೂ ಪ್ರವಾಹದಿಂದಾಗಿ ಜಿಲ್ಲೆಯ ಜನರ ಬದುಕು ಮೂರಾಬಟ್ಟೆಯಾಗಿದೆ. ಈ ನಿಟ್ಟಿನಲ್ಲಿ ರಕ್ಷಣಾ ಕಾರ್ಯಕ್ಕೆ ಸೇನೆ ನಿಯೋಜನೆ ಮಾಡಲಾಗಿದೆ.

ಸಿಕಂದ್ರಾಬಾದ್‌ ನಿಂದ 98 ಯೋಧರ ಪಡೆ ಬಂದಿದ್ದು, ಮೇಜರ್ ಮಾರ್ಟಿನ್ ಅರವಿಂದ್ ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದೆ. ಯೋಧರನ್ನು ಮೂರು ತಂಡಗಳಾಗಿ ವಿಭಾಗಿಸಿ ಅಫಜಲಪುರ್, ಜೇವರ್ಗಿ ಹಾಗೂ ಶಹಾಬಾದ್ ತಾಲೂಕಿನಲ್ಲಿ ಜನರ ರಕ್ಷಣೆಗೆ ನಿಯೋಜಿಸಲಾಗಿದೆ. 

ಭೀಮಾನ ನದಿಯ ರೌದ್ರಾವತಾರ ಇನ್ನೂ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಉಡಚಣ ಗ್ರಾಮ ನೀರಿನಲ್ಲಿ ಮುಳುಗಡೆಯಾಗಿತ್ತು. ಹೀಗಾಗಿ ಗ್ರಾಮದ 225 ಜನರನ್ನು ರಕ್ಷಣೆ ಮಾಡಲಾಗಿದೆ. 

ಭೀಮಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭೀಮಾ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಭೀಮಾ ನದಿಗೆ ಬಿಡಲಾಗಿದೆ. ಇದರಿಂದಾಗಿ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಹ ಉಂಟಾಗಿ ಜನ – ಜಾನುವಾರುಗಳ ಬದುಕು ಬೀದಿಗೆ ಬರುವಂತಾಗಿದೆ. 

Leave a Reply

Your email address will not be published. Required fields are marked *

You May Also Like

ಕರ‍್ಣಿಕೋತ್ಸವದಲ್ಲಿ ಗೊರವಯ್ಯ ನುಡಿದ ಭವಿಷ್ಯವೇನು.?

ಹಾವನೂರ ಗ್ರಾಮದಲ್ಲಿ ಭಾನುವಾರ ಮೈಲಾರಲಿಂಗೇಶ್ವರ ಕರ‍್ಣಿಕೋತ್ಸವದಲ್ಲಿ ಸವನಿಧಿ ಆಯಿತಲೇ ಪರಾಕ್ ಎಂದು ಗೊರವಯ್ಯ ಕರ‍್ಣಿಕ ನುಡಿದನು.

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ವಿದ್ಯಾರ್ಥಿಗಳು ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು

ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.