ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿನ ನಾಲ್ಕು ವಿಧಾನಪರಿಷತ್ ಕ್ಷೇತ್ರಗಳಿಗೆ ಸೆ. 28ರಂದು ಚುನಾವಣೆ ನಡೆಯಲಿದೆ. ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಎಲ್ಲ ಕ್ಷೇತ್ರಗಳಿಂದ ಒಟ್ಟು 30 ಜನ ಕಣದಲ್ಲಿ ಉಳಿದಿದ್ದಾರೆ. 

ಈ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುತ್ತದೆ. ಆದರೆ, ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗೆ ಇದ್ದ ನೋಟಾ ಆಯ್ಕೆಯನ್ನು ಹಿಂಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. 

ಬಿಜೆಪಿಗೆ ಕೆಲವು ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ತಾಗಿದೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಚಿದಾನಂದ ಎಂ. ಪಕ್ಷದ ಅಧಿಕೃತ ಅಭ್ಯರ್ಥಿ. ಆದರೆ, ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಡಿ.ಟಿ. ಶ್ರೀನಿವಾಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಬಿಜೆಪಿ ಮುಖಂಡ ಎಚ್.ಎಸ್. ಲೇಪಾಕ್ಷ್ ಕೂಡ ಸ್ಪರ್ಧೆ ಮಾಡಿದ್ದಾರೆ. ಹೇಗಾದರೂ ಮಾಡಿ ನಾಲ್ಕೂ ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ತಂತ್ರ ಹೆಣೆದಿದ್ದರೆ, ಬಿಜೆಪಿಗೆ ಮುಖಭಂಗ ಸೃಷ್ಟಿಸಲು ವಿರೋಧ ಪಕ್ಷಗಳು ರಣ ತಂತ್ರ ಹೆಣೆದಿವೆ. ನ. 2ಕ್ಕೆ ಎಲ್ಲರ ಹಣೆಬರಹ ತಿಳಿಯಲಿದೆ.

Leave a Reply

Your email address will not be published. Required fields are marked *

You May Also Like

ಸುರಕ್ಷೆ ಮತ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲ ಅಗತ್ಯ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ಉತ್ತರಪ್ರಭ ಸುದ್ದಿ: ಬೆಂಗಳೂರು: ಆ. ೨-ಇಡೀ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸಾವು-ನೋವುಗಳು ಆಗಿವೆ. ಈ…
ಹೂವಿನ ಹಡಗಲಿ: ಬಳ್ಳಾರಿ ಜಿಲ್ಲೆಯ ಹೂನಿನ ಹಡಗಲಿ ತಾಲೂಕಿನಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ಒಟ್ಟು 9…

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮುರುಡಿ ಗ್ರಾಮಕ್ಕೆ 93.33% ರಷ್ಟು ಫಲಿತಾಂಶ

ಉತ್ತರಪ್ರಭ ಮುಂಡರಗಿ: ತಾಲ್ಲೂಕಿನ ಮುರುಡಿಯ ಸರಕಾರಿ ಪ್ರೌಢ ಶಾಲೆಯ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ…

ಸರಕಾರಿ ಹುದ್ದೆಗಳ ನೇಮಕಾತಿ: “ವಯೋಮಿತಿ ಪರಿಷ್ಕರಣೆಗೆ” ನಿರುದ್ಯೋಗಿಗಳ ಆಗ್ರಹ

ಉತ್ತರಪ್ರಭ ಸುದ್ದಿ ರಾಯಬಾಗ: “ರಾಜ್ಯ ಸರಕಾರ ಈಗ ಮೂರ್ನಾಲ್ಕು ವರುಷ ಕೋವಿಡ್ ವ್ಯಾಪಕವಾಗಿ ಹರಡಿ, ಲಾಕಡೊನ್…