ಬೆಂಗಳೂರು : ವ್ಯಕ್ತಿಯೊಬ್ಬ ದಾರಿಯಲ್ಲಿ ಹೋಗುತ್ತ ಸಿಕ್ಕ ಸಿಕ್ಕವರಿಗೆ ಚಾಕು ಇರಿದಿದ್ದಾನೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಬಿನ್ನಿಮಿಲ್ ಸಮೀಪದ ಬಾಳೆ ಮಂಡಿಯಲ್ಲಿ ನಡೆದಿದೆ ಎನ್ನಲಾಗಿದೆ. ಆರೋಪಿಯನ್ನು ಗಣೇಶ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಾರಿ (35) ಎಂಬುವವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಕಾಟನ್ ಪೇಟೆ ಬಳಿಯ ಬಿನ್ನಿಮಿಲ್ ಸಮೀಪ ವ್ಯಕ್ತಿಯೊಬ್ಬ ರಸ್ತೆಯಲ್ಲಿಯೇ ಚಾಕುವಿನಿಂದ ಸಿಕ್ಕ ಸಿಕ್ಕವರ ಮೇಲೆ ಇರಿದಿದ್ದಾನೆ, ಇಲ್ಲಿಯವರೆಗೆ ಈ ವ್ಯಕ್ತಿ 6 ಜನರ ಮೇಲೆ ಚಾಕು ಚುಚ್ಚಿದ್ದಾನೆ ಎಂದು ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಕಾಟನ್ ಪೇಟೆ ಪೊಲೀಸರು ಆರೋಪಿ ಗಣೇಶ್ ನನ್ನು ವಶಕ್ಕೆ ಪಡೆದಿದ್ದು ತನಿಖೆ ಕೈಗೊಂಡಿದ್ದಾರೆ.
