ಉತ್ತರ ಕರ್ನಾಟಕ ಪ್ರವಾಹದ ಕುರಿತು ಪ್ರಧಾನಿಯೊಂದಿಗೆ ಚರ್ಚೆ ಮಾಡಿದ್ದೇನೆ – ಸಿಎಂ!

ಶಿವಮೊಗ್ಗ : ಉತ್ತರ ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಪ್ರವಾಹದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂದರ್ಭದಲ್ಲಿ ಹೆಚ್ಚಿನ ಹಾನಿ ಸಂಭವಿಸಿದ್ದು, ತ್ವರಿತವಾಗಿ ಪರಿಹಾರ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಸಮರ್ಪಕ ಅನುದಾನ ಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕೂಡ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಈ ಜಿಲ್ಲೆ ಹಾಗೂ ಶಿಕಾರಿಪುರ ಕ್ಷೇತ್ರ ಇಡೀ ರಾಜ್ಯದಲ್ಲಿಯೇ ಮಾದರಿಯಾಗಿದೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿರುವ ಜನತೆ ಬಿಜೆಪಿಗೆ ಆಶೀರ್ವಾದ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version