ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರ ಪುತ್ರ ಸುಹಾಸ್ (31)  ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 

ಸುಹಾಸ್ ಅವರಿಗೆ ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದಾಗಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಪ್ರಸನ್ನ ಕುಮಾರ್ ಅವರ ನಿವಾಸಕ್ಕೆ ಆಗಮಿಸಿ ಸುಹಾಸ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಪ್ರಸನ್ನಕುಮಾರ್ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕೂಡ ಈ ಘಳಿಗೆಗೆ ಸಾಕ್ಷಿಯಾಗುತ್ತಿದ್ದಾರೆ. ಕುಟುಂಬವು ದುಃಖದ ನೋವಿನಲ್ಲಿ ಮುಳುಗಿದೆ. 

ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಶಾಸಕ ಪ್ರಸನ್ನಕುಮಾರ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಕೊನೆಯ ಬಾರಿಗೆ ಮಗನ ಮುಖ ನೋಡದ ಪರಿಸ್ಥಿತಿಯಲ್ಲಿಯೂ ಅವರಿದ್ದಾರೆ. ಇದು ಶಾಸಕ ಹಾಗೂ ಕುಟುಂಬಸ್ಥರಿಗೆ ತೀವ್ರ ನೋವು ನೀಡುತ್ತಿದೆ.

ಶಾಸಕ ಪ್ರಸನ್ನ ಕುಮಾರ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮೃತ ಸುಹಾಸ್ ಅವರು ಕಳೆದ ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದರು.

Leave a Reply

Your email address will not be published. Required fields are marked *

You May Also Like

ಶಾಲೆಗಳನ್ನು ತೆರೆಯುವಂತೆ ಮಕ್ಕಳ ಆಯೋಗ ಮನವಿ ಮಾಡಿದ್ದೇಕೆ?

ಬೆಂಗಳೂರು : ಶಾಲೆಗಳು ಕೂಡಲೇ ಆರಂಭವಾಗದಿದ್ದರೆ ಬಾಲ ಕಾರ್ಮಿಕತೆ, ಮಕ್ಕಳ ಸಾಗಾಟ ಮತ್ತು ಬಾಲ್ಯ ವಿವಾಹದಂತಹ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಕ್ಕಳ ಆಯೋಗ ಕಳವಳ ವ್ಯಕ್ತಪಡಿಸಿದೆ.

ಕಾಫಿ ನಾಡಿನಲ್ಲಿ ಸದ್ಯದಲ್ಲಿಯೇ ಶುರುವಾಗಲಿದೆ ವೈದ್ಯಕೀಯ ಕಾಲೇಜು!

ಬೆಂಗಳೂರು : ಕಾಫಿ ನಾಡಿನಲ್ಲಿ 24 ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.

ಶಾಲಾ ಕಟ್ಟಡ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ಆರೋಪ: ಕ್ರಮಕ್ಕೆ ಜೆಡಿಎಸ್ ವಿದ್ಯಾರ್ಥಿ ಘಟಕ ಒತ್ತಾಯ

ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ ಕಳಪೆ ಮಟ್ಟದ್ದಾಗಿದ್ದು, ಅದನ್ನು ತಡೆಗಟ್ಟಬೇಕೆಂದು ಜಾತ್ಯಾತೀತ ಜನತಾದಳ ವಿದ್ಯಾರ್ಥಿ ಘಟಕದಿಂದ ಉಪ‌ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

ಬಂಗಾಳದಲ್ಲಿ ಕೊರೊನಾದೊಂದಿಗೆ ಚಂಡಮಾರುತದ ಕಾಟ!

ಕೊರೊನಾ ವೈರಸ್ ನ ಹಾವಳಿಯ ಮಧ್ಯೆಯೇ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಅಬ್ಬರಿಸುತ್ತಿದೆ.