ಮಸ್ಕಿ: ಕೋವಿಡ್-19 ಹಿನ್ನಲೆಯಲ್ಲಿ ದೇವಿಯ ಪುರಾಣ ಸರಳವಾಗಿ ಆರಚಣೆ ಮಾಡಲಾಗುತ್ತಿದೆ. ಪುರಾಣಕ್ಕೆ ಆಗಮಿಸುವ ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಗಚ್ಚಿನಮಠದ ವರರುದ್ರಮುನಿ ಶಿವಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಭ್ರಮರಾಂಬ ದೇವಿ ಗುಡಿಯಲ್ಲಿ ದೇವಿ ಪುರಾಣ, ಪ್ರವಚನಕ್ಕೆ ಶ್ರೀಗಳು ಚಾಲನೆ ನೀಡಿ ಮಾತನಾಡಿದರು. ಈ ಭಾರಿ ದೇವಿ ಪುರಾಣವನ್ನು ಬೆಳಿಗ್ಗೆ ಪಠಣ ಮಾಡುತ್ತಿದ್ದು ಭಕ್ತರು ದೈಹಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ಬಳಸಿಕೊಂಡು ಪುರಾಣ ಆಲಿಸಬೇಕು ಎಂದರು.

ಭ್ರಮರಾಂಬ ದೇವಿಯ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಘಟ ಸ್ಥಾಪನೆ ನೆರವೇರಿಸಿ ಪುರಾಣ ಪ್ರಾರಂಭಿಸಿದರು. ದೇವರಾಜ ಗವಾಯಿ ಪುರಾಣ ಪಠಣ ಮಾಡಿದರು. ಅಮರೇಶ ಹೂಗಾರ ಸಂಗೀತ ಸಾಥ್ ನೀಡಿದರು. ಅಂಕಲಿಮಠದ ಫಕೀರೇಶ್ವರ ಸ್ವಾಮೀಜಿ, ದೇವಸ್ಥಾನ ಸಮಿತಿಯ ಮುಖಂಡರಾದ ಪ್ರಕಾಶ ಧಾರಿವಾಲ, ಸಿದ್ದಲಿಂಗಯ್ಯ ಗಚ್ಚಿನಮಠ, ಮಲ್ಲಪ್ಪ ನಾಯಿಕೊಡೆ, ನಾಗರಾಜ ಸಜ್ಜನ್, ಮಲ್ಲಿಕಾರ್ಜುನ ಕ್ಯಾತ್ನಟ್ಟಿ, ನಾಗಭೂಷಣ ನಂದಿಹಾಳ, ಷಡಕ್ಷರಪ್ಪ ಬಾಳೆಕಾಯಿ, ಘನಮಠದಯ್ಯ ಸಾಲಿಮಠ, ಮಹಾಂತೇಶ ಮಸ್ಕಿ ಇದ್ದರು.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಮತ್ತೆ ಇಬ್ಬರಿಗೆ ಕೊರೋನಾ ಪಾಸಿಟಿವ್

ಗದಗ: ಜಿಲ್ಲೆಯಲ್ಲಿ ಮತ್ತೆ ಎರಡು ಕೊರೋನಾ ಪಾಸಿಟಿವ್ ದೃಢಪಟ್ಟಿವೆ‌. ಈ ಮೂಲಕ ಸೋಂಕಿತರ ಸಂಖ್ಯೆ 20…

ಲಾಕ್ ಡೌನ್ ನಿಂದಾಗಿ ಹಣ ಕಳೆದುಕೊಂಡವರಿಗೆ ಸಿಕ್ಕ ನೆಮ್ಮದಿ!

ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ರೂ. 10 ಸಾವಿರಗಳನ್ನು ಹಿಂದಿರುಗಿಸುವ ಮೂಲಕ…

ಪರೀಕ್ಷೆ ಬರೆಯುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೆ!

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ.…

ಗ್ರಾಮ ಪಂಚಾಯ್ತಿ ಚುನಾವಣೆ: ಶಿರಹಟ್ಟಿ ತಾಲೂಕಿನ ಮೀಸಲಾತಿಯ ವಿವರ

ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದ್ದು, ಈ ಕುರಿತು ಕ್ಷೇತ್ರವಾರು ಮೀಸಲಾತಿಯನ್ನು ಪ್ರಕಟಿಸಿದೆ. ಇಂದು ಶಿರಹಟ್ಟಿ ತಾಲೂಕಿನ ಗ್ರಾಮ ಪಂಚಾಯತಿಗಳ