ಮುಂಡರಗಿ: ಗದಗ ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಿಂದ ಗದಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಇದಾಗಿದೆ. ಕೊರ್ಲಹಳ್ಳಿ ಸಮೀಪದಲ್ಲಿ ಹೆದ್ದಾರಿ ಪಕ್ಕದಲ್ಲಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಪೋಲಾಗುತ್ತಿರುವ ನೀರು ರೈತರ ಗದ್ದೆಗಳಿಗೆ ನುಗ್ಗಿದ್ದು ರೈತರಿಗೆ ಆತಂಕ ಶುರುವಾಗಿದೆ. ಇನ್ನು ಪೈಪ್ ಒಡೆದ ಸ್ಥಳದ ಮೇಲ್ಭಾಗದಲ್ಲಿಯೇ ವಿದ್ಯುತ್ ತಂತಿ ಇದೆ. ಚಿಮ್ಮತ್ತಿರುವ ನೀರು ವಿದ್ಯುತ್ ತಂತಿಗೆ ತಗಲುತ್ತಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ದುರಸ್ಥಿ ಕಾರ್ಯಕ್ಕೆ ಮುಂದಾಗಬೇಕು ಅನ್ನೋದು ಸ್ಥಳೀಯ ರೈತರ ಆಗ್ರಹವಾಗಿದೆ.

Leave a Reply

Your email address will not be published. Required fields are marked *

You May Also Like

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ಯಾಕೇಜ್: ಸಿಎಂಗೆ ಜೊಲ್ಲೆ ಅಭಿನಂದನೆ

ರಾಜ್ಯದಲ್ಲಿ ಕೊರೊನಾ ಮುಂಚೂಣಿ ವಾರಿಯರ್ಸ್ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪರಿಗಣಿಸಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2000 ರೂ. ನೆರವು ಘೋಷಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಗ್ರಾಪಂ ಚುನಾವಣೆ ಯಾವಾಗ ನಡೆಯಲಿವೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಗ್ರಾಪಂಗೆ ಡಿಸೆಂಬರ್ ಸಮಯದಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಸದ್ಯ ಈ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.

ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆ ಸ್ಪೂರ್ತಿ- ಎಸ್.ಜಿ.ಬಳಬಟ್ಟಿ

ಉತ್ತರಪ್ರಭನಿಡಗುಂದಿ: ಮಕ್ಕಳ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸ್ಪೂರ್ತಿಯಾಗಿದ್ದು ನಿಣಾ೯ಯಕರು ಬದ್ದತೆಯಿಂದ ಕಾರ್ಯನಿರ್ವಹಿಸಿ ತಾರತಮ್ಯ ತೋರದೇ…

ಗಂಗಾಪುರ ಸಕ್ಕರೆ ಕಾರ್ಖಾನೆಯಲ್ಲಿ ಕೊಲೆ ಪ್ರಕರಣ: ಆರೋಪಿ ಬಂಧನ!

ಇತ್ತಿಚೆಗೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗಂಗಾಪುರದ ವಿಜಯನಗರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಸೆಕ್ಯೂರಿಟಿ ಗಾರ್ಡ್ ಕೊಲೆ ಪ್ರಕರಣವನ್ನು ಕೊನೆಗೂ ಮುಂಡರಗಿ ಪೊಲೀಸರು ಭೇದಿಸಿದ್ದಾರೆ.