ವಾಷಿಂಗ್ಟನ್ : ಜಗತ್ತಿನಲ್ಲಿ ದಿನದಿಂದ ದಿನಕ್ಕೆ ಮಹಾಮಾರಿಯ ಅಟ್ಟಹಾಸ ಎಗ್ಗಿಲ್ಲದೆ ಸಾಗುತ್ತಿದೆ. ಸದ್ಯ ಜಗತ್ತಿನಲ್ಲಿ ಬರೋಬ್ಬರಿ 3.95 ಕೋಟಿ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 11,06,705 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಅಮೆರಿಕಾದಲ್ಲಿಯೇ ಮಹಾಮಾರಿಯ ಆರ್ಭಟ ಹೆಚ್ಚಾಗಿದ್ದು, ಇಲ್ಲಿಯವರೆಗೆ ಅಮೆರಿಕಾದಲ್ಲಿ 8,086,780 ಜನ ಸೋಂಕಿಗೆ ಒಳಗಾಗಿದ್ದಾರೆ. 2,18,980 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಕುರಿತು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ. ಸದ್ಯ ಜಗತ್ತಿನಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 39,502,909 ಆಗಿದೆ. ಸಾವಿನ ಸಂಖ್ಯೆ 1,106,705ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆಯಲ್ಲಿ 27,148,927 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 8,954,631 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೆಚ್ಚು ಚೇತರಿಕೆ ಹೊಂದಿರುವ ದೇಶಗಳಲ್ಲಿ ಪಟ್ಟಿಯಲ್ಲಿ ಭಾರತಕ್ಕೆ ಮೊದಲ ಸ್ಥಾನವಿದೆ. ದೇಶದಲ್ಲಿ ಇಲ್ಲಿಯವರೆಗೆ 65,97,210 ಜನ ಗುಣಮುಖರಾಗಿದ್ದಾರೆ. ಅಲ್ಲದೇ, 7,83,311 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಾಲಿವುಡ್ ನಟ ರಣ್ವೀರ್ ಗೆ ಕೊರೊನಾ ಸೋಂಕು

ಬಾಲಿವುಡ್ ಖ್ಯಾತ ಸಹನಟ ರಣವೀರ್ ಶೌರಿಗೆ ಕೊರೊನಾ ಪಾಸಿಟಿವ್ ಆಗಿದೆ. ಈ ವಿಷಯವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇ-ರ‌್ಯಾಲಿ ಪರಿಣಾಮ: 25 ಬಿಜೆಪಿ ಲೀಡರ್ಸ್ ಪಾಸಿಟಿವ್

ಪಾಟ್ನಾ: ಬಿಜೆಪಿಯ ಪಾಟ್ನಾ ಕೇಂದ್ರ ಕಚೇರಿಯಲ್ಲಿ ಆತಂಕ ಶುರುವಾಗಿದೆ. ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗೇಂದ್ರನಾಥ್, ಪ್ರಧಾನ ಕಾರ್ಯದರ್ಶಿ ದೇವೇಶ್ಕುಮಾರ್ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ

ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಆಸ್ಪತ್ರೆ ಗುರುತಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ಸೋಂಕಿತ ರೋಗಿಗಳಿಗೆ ಉಚಿತ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಎಂದು ಸುಪ್ರೀಂ ಕೋರ್ಟ್, ಸರ್ಕಾರಕ್ಕೆ ಸೂಚಿಸಿದೆ.

ಸಾಮಾಜಿಕ ಜಾಲತಾಣ ದುರ್ಬಳಕೆ ಮಾಡಿಕೊಂಡರೆ ಹುಷಾರ್!

ನವದೆಹಲಿ : ಸಾಮಾಜಿಕ ಜಾಲತಾಣ ದುರ್ಬಳಕೆಯಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.