ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿ ಹಾಗೂ ಸಂಜನಾಗೆ ಬೇಲ್ ಕೊಡದಿದ್ದರೆ, ಬಾಂಬ್ ಹಾಕುತ್ತೇವೆ ಎಂದು ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. 

ರಾಗಿಣಿ ಮತ್ತು ಸಂಜನಾಗೆ ಜಾಮೀನು ನೀಡದೆ ಇದ್ದರೆ, ಸಿಟಿ ಸಿವಿಲ್ ಕೋರ್ಟ್ ಮತ್ತು ಕಮೀಷನರ್ ಆಫೀಸಿಗೆ ಬಾಂಬ್ ಹಾಕುತ್ತೇವೆ ಎಂಬ ಬೆದರಿಕೆ ಪತ್ರವೊಂದು ಬಂದಿತ್ತು. ಈ ಪತ್ರವನ್ನು ಸಿಟಿ ಸಿವಿಲ್ ಕೋರ್ಟ್ ಜಡ್ಜ್, ಕಮೀಷನರ್ ಕಮಲ್ ಪಂಥ್, ಜಂಟಿ ಪೊಲೀಸ್ ಆಯುಕ್ತ, ಸಂದೀಪ್ ಪಾಟೀಲ್ ಮತ್ತು ಡಿಸಿಪಿ ರವಿಕುಮಾರ ಅವರಿಗೆ ಬರೆಯಲಾಗಿತ್ತು. 

ಪತ್ರ ಕಳುಹಿಸಿದ್ದ ವ್ಯಕ್ತಿ, ಪತ್ರದೊಂದಿಗೆ ವ್ಯಕ್ತಿಯೊಬ್ಬರ ವೋಟರ್ ಐಡಿ ಮತ್ತು ಎರಡು ಮೊಬೈಲ್ ನಂಬರ್ ಕಳುಹಿಸಿದ್ದ. ವೋಟರ್ ಐಡಿ ಕೊಡಿಯಳ್ಳಿ ಪಂಚಾಯತ್, ಹರಿವೇಸಂದ್ರ ಗ್ರಾಮದ ಶಿವಪ್ರಕಾಶ್ ಎಂಬ ಹೆಸರಿನಲ್ಲಿ ಪತ್ರ ಬಂದಿತ್ತು. ಎನ್‍ ಡಿಪಿಎಸ್ ಕೋರ್ಟ್ ನ್ಯಾಯಾಧೀಶರಿಗೆ ಪತ್ರ ಬಂದಿದ್ದು, ನಟಿ ಸಂಜನಾ ಮತ್ತು ರಾಗಿಣಿಗೆ ಜಾಮೀನು ನೀಡಬೇಕು. ಇಲ್ಲವಾದಲ್ಲಿ ಕಾರು ಉಡಾಯಿಸುತ್ತೇವೆ ಎಂದು ಹೇಳಲಾಗಿತ್ತು.

ಸಿಸಿಬಿ ಡಿಸಿಪಿ ರವಿಕುಮಾರ್ ಮತ್ತು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರಿಗೆ ಬಂದ ಪತ್ರದಲ್ಲಿ ಡ್ರಗ್ ಕೇಸ್ ಹಾಗು ಡಿಜೆ ಹಳ್ಳಿ ಕೇಸ್ ತನಿಖೆ ನಿಲ್ಲಿಸದಿದ್ದರೆ ಸರಿ ಇರುವುದಿಲ್ಲ ಎಂದು ಎಚ್ಚರಿಸಲಾಗಿತ್ತು. 

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ 18 ಭ್ರಷ್ಟರ ಬೇಟೆಯಾಡಿದ ಎಸಿಬಿ: ಗದುಗಿನ ಬಸವಕುಮಾರ್ ಅಣ್ಣಿಗೇರಿಗೆ ಬಿಗ್ ಶಾಕ್

ಉತ್ತರಪ್ರಭರಾಜ್ಯ: ಇಂದು ರಾಜ್ಯಾದ್ಯಂತ ಭ್ರಷ್ಟರ ವಿರುದ್ಧ ಎಸಿಬಿ ದಾಳಿ ನಡೆಸಿದ್ದು, ಹಲವು ಇಲಾಖೆಗಳ 18 ಅಧಿಕಾರಿಗಳ…

ಕಲ್ಯಾಣ ಕರ್ನಾಟಕದಲ್ಲಿ ಪ್ರತ್ಯೇಕ ಧ್ವಜ ಹಾರಿಸಲು ಪ್ರಯತ್ನ – ಹಲವರ ಬಂಧನ!

ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಹುಲ್ಲೂರಿನಲ್ಲಿ ಮಳೆಯ ಆರ್ಭಟ: ಧರೆಗುರುಳುತ್ತಿವೆ ಮನೆ-ಮರಗಳು

ಕಳೆದ ಎರ್ಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಹಾಗೂ ಮರಗಳು ಧರೆಗುರುಳುತ್ತಿವೆ. ಇದರಿಂದ ಗದಗ ಜಿಲ್ಲೆಯ ರೋಣ ತಾಲೂಕಿನ ಹುಲ್ಲೂರು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

ನಿಗದಿತ ವೇಳಾಪಟ್ಟಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಹೊರಟ್ಟಿ ಪತ್ರ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.