ದೇಶ ಉದ್ಧೇಶಿಸಿ ಮಾತನಾಡಲಿರುವ ಮೋದಿ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಇಂದು ಸಂಜೆ 6ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಉದ್ಧೇಶಿಸಿ ಮಾತನಾಡಲಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ದೇಶದ ಜನರನ್ನು ಉದ್ಧೇಶಿಸಿ ಮಾತನಾಡಲಿದ್ದೇನೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ ಡೌನ್ ಘೋಷಣೆ ಮಾಡುವ ಸಂದರ್ಭದಲ್ಲಿ ದೇಶ ಉದ್ಧೇಶಿ ಮಾತನಾಡಿದ್ದರು. ಸದ್ಯ ಮತ್ತೊಮ್ಮೆ ಜನರ ಮುಂದೆ ಬರುತ್ತಿದ್ದಾರೆ. ಹೀಗಾಗಿ ಜನರಲ್ಲಿ ಕುತೂಹಲ ಮನೆ ಮಾಡಿದೆ.

ಆ ನಂತರ ಪ್ರಧಾನಿ ಅವರು ದೇಶ ಉದ್ಧೇಶಿಸಿ ಮಾತನಾಡಿರಲಿಲ್ಲ. ಇಂದು ಯಾವ ವಿಚಾರವಾಗಿ ಅವರು ಮಾತನಾಡಲಿದ್ದಾರೆ ಎಂಬುವುದು ತಿಳಿದಿಲ್ಲ. ಆರ್ಥಿಕ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ನಿಖರವಾಗಿ ತಿಳಿದು ಬಂದಿಲ್ಲ.

ಬೇರೆ ದೇಶಗಳಿಗೆ ಹೋಲಿಸಿದರೆ ಸದ್ಯ ಈಗ ಭಾರತದಲ್ಲಿ ಕೊರೊನಾ ದಿನದ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಈ ವಿಚಾರವನ್ನು ಮೋದಿ ಪ್ರಸ್ತಾಪ ಮಾಡುತ್ತಾರೆಯೇ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.

Exit mobile version