ಲಕ್ಷ್ಮೇಶ್ವರ: ಸೋಕ್ ಪಿಟ್ ಮತ್ತು ಪೌಷ್ಟಿಕ ತೋಟ ನಿರ್ಮಾಣ ಗುರಿಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ನರೇಗಾ ಸಿಬ್ಬಂದಿ ಶೀಘ್ರದಲ್ಲೇ ತಲುಪಲು ಪ್ರಯತ್ನಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಬಿ.ಕಲ್ಲೇಶ ಅವರು ಹೇಳಿದರು.

ಲಕ್ಷ್ಮೇಶ್ವರ ಪಟ್ಟಣದ ತಾಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾದ ಲಕ್ಷ್ಮೇಶ್ವರ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕಿನ ಪಿಡಿಓ ಗಳಿಗೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಪಶ್ಚಿಮ ಪದವೀಧರರ ಚುನಾವಣೆ ಎದುರಾಗಿರೋ ಹಿನ್ನೆಲೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸರ್ಕಾರದ ಕಾಮಗಾರಿಗಳನ್ನು ನಿಗದಿತ ದಿನಾಂಕದೊಳಗೆ ಪೂರ್ಣಗೊಳಿಸಿಲು ಶ್ರಮಿಸಬೇಕು ಎಂದರು.

ಪದವೀಧರ ಕ್ಷೇತ್ರದ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ ಎಂಬ ಕಾರಣಕ್ಕೆ ಸರ್ಕಾರದ ಸಾರ್ವಜನಿಕ ಕಾರ್ಯಗಳಲ್ಲಿ ವಿಳಂಬವಾಗಬಾರದು ಎಂದರು.

ಸರ್ಕಾರದಿಂದ ಘೋಷಣೆಯಾಗಿ ಜಾರಿಯಲ್ಲಿರುವ ಗ್ರಾಮ ಪಂಚಾಯತ್ ಮಟ್ಟದ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಪಂಚಾಯತ್ ಪಿಡಿಓಗಳು ಶ್ರಮಿವಹಿಸಬೇಕು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮಯಕ್ಕೆ ಸರಿಯಾಗಿ ತೆರಿಗೆ ಪರಿಷ್ಕರಣೆಗೊಳಿಸಿ ಹೆಸ್ಕಾಂಗೆ ಪಾವತಿಸಬೇಕಾದ ಬಾಕಿ ವಿದ್ಯುತ್ ಬಿಲ್ ಮೊತ್ತವನ್ನು ಪಾವತಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ತಾಲೂಕಿನ ಗ್ರಾಮ ಪಂಚಾಯತ್ ಸಿಬ್ಬಂದಿಗಳ ಸೇವಾ ಪುಸ್ತಕ ತೆರೆದು ಪ್ರಗತಿಯಲ್ಲಿಟ್ಟುಕೊಳ್ಳಬೇಕು ಎಂದು ಸಭೆಯಲ್ಲಿದ್ದ ಪಿಡಿಓ ಗಳಿಗೆ ಸೂಚಿಸಿದರು.

ತಾಲೂಕಿನಲ್ಲಿ ಕಳೆದ ೪೫ ದಿನಗಳಿಂದ ಬಚ್ಚಲುಗುಂಡಿ ಹಾಗೂ ಪೌಷ್ಟಿಕ ತೋಟ ಅಭಿಯಾನ ನಡೆಸಿದ್ರು ನಿರ್ಧಿಷ್ಟ ಗುರಿ ತಲುಪಲು ಸಾಧ್ಯವಾಗಿಲ್ಲ. ತಕ್ಷಣ ಆಯಾ ಗ್ರಾಮದ ವ್ಯಾಪ್ತಿಯ ಜನರಲ್ಲಿ ಬಚ್ಚಲುಗುಂಡಿ ಹಾಗೂ ಪೌಷ್ಟಿಕ ತೋಟ ನಿರ್ಮಾಣದ ಜಾಗೃತಿ ಮೂಡಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಅಂತ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಎಚ್ಚರಿಕೆ ನೀಡಿದರು. ಮುಂದಿನ ಸಭೆಯ ವೇಳೆಗೆ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಲಕ್ಷ್ಮೇಶ್ವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಆರ್.ವೈ. ಗುರಿಕಾರ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಮೇ.31 ರಂದು ರೋಣದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ರೋಣ: ರಾಜೀವ್ ಗಾಂಧಿ ಆಯುರ್ವೇದಿಕ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಗುವದು ಎಂದು ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ತಿಳಿಸಿದರು.

ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿ

80 ವರ್ಷ ಮೇಲ್ಪಟ್ಟ ಮತದಾರರ ಮತದಾನ ಜಾಗ್ರತಿಯಲ್ಲಿ: ಅಭಯ ಪಾಟೀಲ ಅಭಿಮತ ಉತ್ತರಪ್ರಭ ಸುದ್ದಿ ರೋಣ:…

ದುಡ್ಡಿದ್ದವರು ಮಾತ್ರ ಕುಡಿತಾರೆ ಅಂದ್ರು ಅಬಕಾರಿ ಸಚಿವರು

ನಮ್ಮವು ಖರ್ಚು ವೆಚ್ಚ ಇರುತ್ತದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಟ್ಯಾಕ್ಸ್ ಹೆಚ್ಚಳ ಮಾಡಲಾಗಿದೆ. ಈ ಮಾದರಿಯನ್ನು ಅನುಸರಿಸಿಯೇ ನಮ್ಮ ರಾಜ್ಯದಲ್ಲೂ ಟ್ಯಾಕ್ಸ್ ಹೆಚ್ಚಿಸಲಾಗಿದೆ ಅಂತಾರೆ ಅಬಕಾರಿ ಮಿನಿಸ್ಟರ್.

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 348. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4804 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2824 ಸಕ್ರೀಯ ಪ್ರಕರಣಗಳಿವೆ.