ಭೋಪಾಲ್ :  ಬಿಜೆಪಿ ಜನರು, ಮತದಾರರನ್ನು ತಪ್ಪು ದಾರಿಗೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರಿಗೆ ಮಾಜಿ ಸಿಎಂ ಕಮಲ್ ನಾಥ್ ಪತ್ರ ಬರೆದಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಇಮರ್ತಿ ದೇವಿ ಅವರನ್ನು ಐಟಂ ಎಂದು ಕರೆದು ಆಡಳಿತಾರೂಢ ಪಕ್ಷಗಳ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಈ ಪತ್ರ ಬರೆದಿದ್ದಾರೆ.

ಏಳು ತಿಂಗಳಲ್ಲಿಯೇ ಅದೂ ಬಿಜೆಪಿಯ ಆಡಳಿತ ಅವಧಿಯಲ್ಲಿ ಮಧ್ಯ ಪ್ರದೇಶ ಮತ್ತೊಮ್ಮೆ ಮಹಿಳೆಯರ ವಿರುದ್ಧದ ಅಪರಾಧದಲ್ಲಿ ಉನ್ನತ ಸ್ಥಾನಕ್ಕೆ ಹೋಗಿದೆ. ಈ ಕುರಿತು ಸಿಎಂ ಚವ್ಹಾಣ್ ಅವರು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ನಿಮ್ಮ 16 ವರ್ಷಗಳ ಆಡಳಿತದಲ್ಲಿ ರಾಜ್ಯ ಹೆಣ್ಣುಮಕ್ಕಳ ವಿರುದ್ಧ ಅಪರಾಧ, ಅತ್ಯಾಚಾರ ಕೇಸುಗಳಲ್ಲಿ ಉನ್ನತ ಸ್ಥಾನದಲ್ಲಿದೆ. ಆದರೆ ಇಷ್ಟು ದಿನ ನೀವು ಮಾತ್ರ ಮೌನವಾಗಿದ್ದೀರಿ. ಹೆಣ್ಣು ಮಕ್ಕಳ ಬಗ್ಗೆ ಅಷ್ಟೊಂದು ಗೌರವ, ಕಾಳಜಿಯಿದ್ದಿದ್ದರೆ ಏಕೆ ನೀವು ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ನಾನು ಸಚಿವೆ ವಿರುದ್ಧ ಯಾವುದೇ ಅಗೌರವ ತೋರಿಲ್ಲ. ಅಲ್ಲದೇ, ಅಂತಹ ಕೆಟ್ಟ ಹೇಳಿಕೆ ನೀಡಿಲ್ಲ. ಆದರೆ ನೀವು ಸುಳ್ಳು ಹೇಳುತ್ತೀರಿ, ನಾನು ಹೇಳಿರುವ ಶಬ್ದದಲ್ಲಿ ಸಾಕಷ್ಟು ಅರ್ಥವಿದೆ. ಆ ಶಬ್ದವನ್ನು ದುರುದ್ದೇಶ ಪೂರ್ವಕವಾಗಿ ತಪ್ಪಾಗಿ ವ್ಯಾಖ್ಯಾನಿಸಿ ನಿಮ್ಮ ಪಕ್ಷದವರು ನನ್ನ ವಿರುದ್ಧ ಸುಳ್ಳು ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಆಸ್ಪತ್ರೆ ಗುರುತಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ಸೋಂಕಿತ ರೋಗಿಗಳಿಗೆ ಉಚಿತ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಎಂದು ಸುಪ್ರೀಂ ಕೋರ್ಟ್, ಸರ್ಕಾರಕ್ಕೆ ಸೂಚಿಸಿದೆ.

ಮೂರನೇ ಲಾಕ್ ಡೌನ್ ಅಂತ್ಯ – ನಾಲ್ಕರಲ್ಲಿ ಏನಿರತ್ತೆ? ಏನಿರಲ್ಲ?

ನವದೆಹಲಿ: ನಾಳೆ ಮೂರನೇ ಹಂತದ ಲಾಕ್ ಡೌನ್ ಗೆ ಕೊನೆಯ ದಿನ. ಹೀಗಾಗಿ ನಾಲ್ಕನೇ ಹಂತದ…

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 348. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4804 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2824 ಸಕ್ರೀಯ ಪ್ರಕರಣಗಳಿವೆ.