ಯಲಬುರ್ಗಾ: ಸಿಡಿಲು ಬಡಿದ ಪರಿಣಾಮ ಬಾಲಕಿಯೋರ್ವಳು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗೆದಗೇರಿ ತಾಂಡಾದಲ್ಲಿ ನಡೆದಿದೆ.
ರೂಪಾ ವೆಂಕಟೇಶ ಚವ್ಹಾಣ (15) ಸಿಡಿಲು ಬಡಿದು ಮೃತಪಟ್ಟಿದ್ದಾಳೆ. ಕುಟುಂಬಸ್ಥರೊಂದಿಗೆ ಹೊಲದಲ್ಲಿ ಕೆಲಸ ಮಾಡುವ ವೇಳೆ ಈ ಘಟನೆ ಸಂಭವಿಸಿದೆ. ಸಿಡಿಲು ಬಡಿದ ಪರಿಣಾಮ ರೂಪ ಸ್ಥಳದಲ್ಲೆ ಸಾವನ್ನಪ್ಪಿದ್ದಾಳೆ. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
