ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. 

ಅವರು ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿ ಸಂಜೆಯ ವೇಳೆಗೆ ಮರಳಿ ಬೆಂಗಳೂರಿಗೆ ಬರಲಿದ್ದಾರೆ. 

ಮೊದಲು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಆ ನಂತರ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳ ಸಮೀಕ್ಷೆ ನಡೆಸಿ ಕಲಬುರಗಿಗೆ ಆಗಮಿಸಲಿದ್ದಾರೆ. ಆ ನಂತರ ಎರಡೂ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. 

ಅಲ್ಲಿಂದ ನೇರವಾಗಿ ವಿಜಯಪುರ ಜಿಲ್ಲೆಯ ಸಮೀಕ್ಷೆ ನಡೆಸಿ ಆಲಮಟ್ಟಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ರಾಯಚೂರು ಜಿಲ್ಲೆಯ ಸಮೀಕ್ಷೆ ನಡೆಸಿದ ನಂತರ ಬಳ್ಳಾರಿಯ ತೋರಣಗಲ್ಲಿಗೆ ವಾಪಸಾಗಲಿದ್ದಾರೆ. ಅಲ್ಲಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Leave a Reply

Your email address will not be published. Required fields are marked *

You May Also Like

ಕಮಲ ಕೈಯಲ್ಲಿ ಹಿಡಿದ ರಾಜರಾಜೇಶ್ವರಿ – ಹ್ಯಾಟ್ರಿಕ್ ಗೆಲುವು ಸಾಧಿಸಿದ ಮುನಿರತ್ನ!

ಬೆಂಗಳೂರು : ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ಸನಿಹಕ್ಕೆ ಬಂದು ನಿಂತಿದ್ದಾರೆ.

ಮಹಾಮಾರಿಗೆ ತತ್ತರಿಸಿದ ಮಹಾರಾಷ್ಟ್ರ- ನಿನ್ನೆ ಒಂದೇ ದಿನ ಎಷ್ಟು ಕೇಸ್ ಗಳು ಗೊತ್ತಾ?

ಮುಂಬಯಿ : ಕೊರೊನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ…

ಬೆಳಗಾವಿ ಹಾಗೂ ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಹಾಗೂ ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಗೊಂಡಿದ್ದಾರೆ.