ಲಕ್ಷ್ಮೇಶ್ವರ: ಬೆಂಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಜನ – ಜೀವನ ಅಸ್ತವ್ಯಸ್ಥಗೊಂಡಿದೆ.
ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹಳ್ಳದಕೆರೆ ಓಣಿಯಲ್ಲಿ ಮನೆಗಳ ಗೋಡೆ ಕುಸಿದಿವೆ.
ಹಳ್ಳದಕೆರೆ ಓಣಿಯ ಬಸಪ್ಪ ಮರಿಬಸಪ್ಪನ್ನ ಎಂಬುವವರಿಗೆ ಸೇರಿದ್ದ ಮನೆಯ ಗೋಡೆ ಕುಸಿದಿದೆ. ಪರಿಣಾಮವಾಗಿ ಅನಾಹುತವೊಂದು ತಪ್ಪಿದಂತಾಗಿದೆ.

ಹೀಗಾಗಿ ಪಕ್ಕದ ಮನೆಯ ಆನಂದ ಅಮರಶೆಟ್ಟಿ ಕುಟುಂಬಸ್ಥರು ಅಪಾಯದಿಂದ ಪಾರಾಗಿದ್ದಾರೆ. ಮನೆ ಗೋಡೆ ಕುಸಿಯುವಾಗ ವಿಚಿತ್ರವಾದ ಶಬ್ದ ಕೇಳಿ ಬಂದ ಪರಿಣಾಮ ಮನೆಯಲ್ಲಿದ್ದವರು ಹೊರಗಡೆ ಓಡಿ ಬಂದಿದ್ದಾರೆ. ಇದರಿಂದಾಗಿ ಜೀವ ಹಾನಿ ತಪ್ಪಿದಂತಾಗಿದೆ. ಈ ಕುಟುಂಬಸ್ಥರು ಮನೆಯಿಂದ ಹೊರಗೆ ಓಡಿ ಬರುತ್ತಿದ್ದಂತೆ ಅಪಾಯ ತಪ್ಪಿದೆ.

ಆದರೆ, ತೀವ್ರವಾದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಮನೆ ಶಿಥೀಲಗೊಂಡ ಹಿನ್ನೆಲೆಯಲ್ಲಿ ಮನೆಯ ಮಾಲೀಕ ಬಸಪ್ಪ ಅವರು ಕುಟಂಬ ಸಮೇತರಾಗಿ ಮನೆಯಿಂದ ಹೊರಗೆ ಹೋಗಿದ್ದರು. ಹೀಗಾಗಿ ಕುಟುಂಬಸ್ಥರು ಹಾಗೂ ಪಕ್ಕದ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.