ಪಂಜಾಬ್ ಹಾದಿ ಹಿಡಿದು ಕೇಂದ್ರದ ವಿರುದ್ಧ ನಿಂತ ರಾಜಸ್ಥಾನ್ ಸರ್ಕಾರ!

ಜೈಪುರ : ಕೃಷಿ ಮಸೂದೆಯನ್ನು ಪಂಜಾಬ್ ಸರ್ಕಾರ ವಿರೋಧಿಸಿದ ಬೆನ್ನಲ್ಲಿಯೇ ರಾಜಸ್ಥಾನ್ ಸರ್ಕಾರ ಕೂಡ ಅಪಸ್ವರ ಎತ್ತಿದೆ.

ರಾಜಸ್ಥಾನ್ ಸಿಎಂ ಅಶೋಕ್ ಗೆಹ್ಲೋಟ್ ಈ ಕುರಿತು ಟ್ವೀಟ್ ಮಾಡಿದ್ದು, ಹೊಸ ಮಸೂದೆ ತರುವುದಾಗಿ ಹೇಳಿದ್ದಾರೆ. ಇತ್ತೀಚೆಗಷ್ಟೇ ಇದೆ ವಿಚಾರವಾಗಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ಕೃಷಿ ಮಸೂದೆ ತಡೆಗೆ  ಅಧಿವೇಶನದಲ್ಲಿ ನಾಲ್ಕು ಮಸೂದೆಗಳನ್ನು ಮತ್ತು ನಿರ್ಣಯಗಳನ್ನು ಅಂಗೀಕರಿಸಿತ್ತು. ಇದರ ಬೆನ್ನಲ್ಲಿಯೇ ರಾಜಸ್ಥಾನ ಸರ್ಕಾರ ಕೂಡ ಈ ಬೆಳವಣಿಗೆಯ ನಡುವೆಯೇ ರಾಜಸ್ಥಾನ ಸರ್ಕಾರ ಕೂಡ ಕೇಂದ್ರದ ವಿರುದ್ಧ ನಿಂತಿದೆ. 

ಕೇಂದ್ರ ಸರ್ಕಾರ ರೂಪಿಸಿರುವ ಮೂರು ಕೃಷಿ ಕಾನೂನುಗಳ ವ್ಯಾಪ್ತಿಯಿಂದ ರಾಜ್ಯಗಳನ್ನು ಹೊರಗಿಡಲು ಸಾಧ್ಯವಾಗುವಂತೆ ರಾಜ್ಯಮಟ್ಟದಲ್ಲಿ ಕಾನೂನು ರಚಿಸುವ ಸಾಧ್ಯತೆಗಳ ಬಗ್ಗೆ ಚಿಂತನೆ ನಡೆಸುವಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಸಲಹೆ ನೀಡಿದ್ದರು. ಇದರ ಬೆನ್ನಲ್ಲಿಯೇ ಪಂಜಾಬ್ ಹಾಗೂ ರಾಜಸ್ಥಾನ್ ಸರ್ಕಾರಗಳು ಕೇಂದ್ರದ ವಿರುದ್ಧ ನಿಂತಿವೆ.

Exit mobile version