ಬೆಂಗಳೂರು: ಪ್ರವಾಹ ಸಂತ್ರಸ್ಥರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಪರೀತ ಮಳೆಯಾಗುತ್ತಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆರಾಯನ ಅವಾಂತರ ಜೋರಾಗಿದೆ.

ಇದರಿಂದ ಜನರ ಬದುಕು ಬೀದಿಗೆ ಬಂದಿದೆ. ಹಲವರು ಮನೆ – ಮಠಗಳನ್ನು ಕಳೆದುಕೊಂಡಿದ್ದಾರೆ. ದವಸ –ಧಾನ್ಯಗಳು ಇಲ್ಲವಾಗಿದೆ. ಜಾನುವಾರುಗಳನ್ನು ರೈತರು ಕಳೆದುಕೊಂಡಿದ್ದಾರೆ. ಜಮೀನುಗಳಲ್ಲಿ ಬೆಳೆಗಳು ಮಣ್ಣು ಪಾಲಾಗಿವೆ. ಹಲವರಂತೂ ಬಟ್ಟೆ ಬರೆ ಕೂಡ ಇಲ್ಲದ ಸ್ಥಿತಿಗೆ ಬಂದು ನಿಂತಿದ್ದಾರೆ.

ಈ ನಿಟ್ಟಿನಲ್ಲಿ ಸರ್ಕಾರ ಜನರಿಗೆ ಪರಿಹಾರ ಘೋಷಿಸಿದೆ. ಸರ್ಕಾರವು ಎಸ್ ಡಿಆರ್ಎಫ್ ಹಾಗೂ ಎನ್ ಡಿಆರ್ ಎಫ್ ಫಂಡ್ ನಲ್ಲಿ ಬಟ್ಟೆ–ಬರೆ ಹಾಗೂ ದಿನಬಳಕೆ ವಸ್ತುಗಳಿಗೆ ಹಣ ಬಿಡುಗಡೆ ಮಾಡಿದೆ. ಮಳೆಯಿಂದ ಹಾನಿಗೊಳಗಾದ ಪ್ರತಿ ಕುಟುಂಬಕ್ಕೆ ರೂ. 3,800 ಪರಿಹಾರದೊಂದಿಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದ ವತಿಯಿಂದ ರೂ. 6,200 ಸೇರಿಸಿ ರೂ. 10 ಸಾವಿರದಂತೆ ಪರಿಹಾರ ಘೋಷಿಸಿದೆ.

ಅಲ್ಲದೇ, ಮಳೆಯಿಂದ ತೀವ್ರವಾಗಿ ಹಾಗೂ ಭಾಗಶಃ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ ಹಾಗೂ ದುರಸ್ಥಿಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ಘೋಷಿಸಲಾಗಿದೆ. ಮಳೆಯಿಂದ ಶೇ.75ಕ್ಕಿಂತ ಹೆಚ್ಚು ಹಾಗೂ ಸಂಪೂರ್ಣ ಮನೆ ಹಾನಿಯಾದ ಕುಟುಂಬಗಳಿಗೆ ರೂ. 5 ಲಕ್ಷ, ಶೇ. 25 ರಿಂದ ಶೇ.75ರಷ್ಟು (ಕೆಡವಿ ಹೊಸದಾಗಿ ನಿರ್ಮಿಸಲು) ಹಾನಿಯಾದ ಮನೆಗಳ ನಿರ್ಮಾಣಕ್ಕಾಗಿ ರೂ. 5 ಲಕ್ಷ, ಶೇ.25ರಿಂದ ಶೇ.75ರಷ್ಟು ಭಾಗಶಃ ಮನೆ ಹಾನಿಯಾಗಿದ್ದಕ್ಕೆ ರೂ.3 ಲಕ್ಷ, ಶೇ. 15ರಿಂದ ಶೇ. 25ರಷ್ಟು ಅಲ್ವಸ್ವಲ್ಪ ಮನೆ ಹಾನಿಯಾಗಿದ್ದರೆ ರೂ. 50 ಸಾವಿರ ಪರಿಹಾರ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಉಪಲೋಕಾಯುಕ್ತರಾಗಿ ನೇಮಕ

ಉತ್ತರಪ್ರಭ ಸುದ್ದಿಬೆಂಗಳೂರ: ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಹೈಕೋರ್ಟನ ಮಾಜಿ ನ್ಯಾಯಾಧೀಶರಾದ…

ವಿದ್ಯಾರ್ಥಿಗಲಿಗೆ ಈ ವರ್ಷ ಸೈಕಲ್ ಸಿಗೋದು ಡೌಟ್!

ರಾಜ್ಯದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜ್ಯ ಸರ್ಕಾರ ಈ ವರ್ಷ ಸೈಕಲ್ ಖರೀದಿಯನ್ನು ಕೈ ಬಿಡಲು ನಿರ್ಧರಿಸಿದೆ ಎನ್ನಲಾಗಿದೆ.

ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಸ್ಥಾನ: ನಾಮಪತ್ರ ಸಲ್ಲಿಕೆ ವೇಳೆ ಹೈಡ್ರಾಮಾ..!

ಉತ್ತರಪ್ರಭ ಗದಗ : ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಬಿಜೆಪಿ-ಕಾಂಗ್ರೆಸ್ ನಡುವೆ ಕಾವುಕಟ್ಟಿದ…

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6245…