ಗದಗ: ನಗರದಲ್ಲಿಂದು ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಎಸಿಬಿ ಅಧಿಕಾರಿಗಳು ರುದ್ರೇಶ್ ಅವರಿಗೆ ಸಂಬಂಧಿಸಿದಂತೆ ಏಕಕಾಲಕ್ಕೆ 3 ಕಡೆ ದಾಳಿಮಾಡಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ನೌಕರರ ಭವನ ಬಳಿ ಇರುವ ಮನೆ, ಜಿಲ್ಲಾಡಳಿತ ಭವನದ ಕಚೇರಿ ಹಾಗೂ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಅಧಿಕಾರಿ ಎಸ್.ಎನ್.ರುದ್ರೇಶ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದಾಳಿ ವೇಳೆ ಚಿನ್ನ ಹಾಗೂ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ಇನ್ನು ಕಡತಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಎಸಿಬಿ ಡಿವೈಎಸ್ಪಿ ಮಹಾಂತೇಶ, ಗದಗ ಸಿಪಿಐ ಧರಣಾಯಿಕ್, ಸಿಪಿಐ ಸುನೀಲ್ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಡ್ಯಾಂ : c ಕ್ಯುಸೆಕ್ ನೀರು ಹೊರಕ್ಕೆ ಗುಲಾಬಚಂದ ಜಾಧವ

ಆಲಮಟ್ಟಿ: ಜಲಾಶಯಕ್ಕೆ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಹೊರ ಹರಿವು ಆರಂಭಗೊಂಡಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ,ರಾಜ್ಯದ…

ಸದನಕ್ಕೆ ಅಷ್ಟೇ ಅಲ್ಲ ರಾಜ್ಯಕ್ಕೆ ಮಾಡಿದ ಅವಮಾನವಿದು

ಸಿದ್ದರಾಮಯ್ಯ ಅವರೇ, ನಿಮ್ಮ ಈ ಸಾಧನೆಯನ್ನು ರಾಜ್ಯದ ಜನತೆ ಮರೆತಿಲ್ಲ. ಕಲಾಪ ಬಹಿಷ್ಕಾರ ನಿಮ್ಮ ದುರಹಂಕಾರ ಮತ್ತು ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿ.

ಅಳಲು ತೊಡಿಕೊಂಡ 9ನೇ ವಾರ್ಡಿನ ನಿವಾಸಿ:ಕುಸಿದ ಬಿದ್ದ ಮನೆಗೆ ತಪ್ಪಿದ ಪರಿಹಾರ

ವರದಿ: ವಿಠಲ ಕೆಳೂತ್ಮಸ್ಕಿ: ಮಳೆಗೆ ಮನೆ ಕಳೆದುಕೊಂಡ ಅರ್ಹ ಪಲಾನುಭವಿಗಳಿಗೆ ಕೊಟ್ಯಾಂತರ ರೂಪಾಯಿ ಪರಿಹಾರ ನೀಡಿದೆ.…

ರಾಜ್ಯದಲ್ಲಿ ಮತ್ತೊಮ್ಮೆ ರೈತರಿಂದ ಬಂದ್ ಕರೆ

ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.