ಬೆಂಗಳೂರು : ನನ್ನ ಅತ್ತಿಗೆಗೆ ಗಂಡು ಮಗು ಜನಿಸಿದ್ದು, ತುಂಬಾ ಸಂತಸ ನೀಡಿದೆ. ಮಗುವನ್ನು ಕೈಯಲ್ಲಿ ಹಿಡಿದಾಗ ನನ್ನ ಅಣ್ಣನೊಂದಿಗೆ ಇದ್ದೇನೆ ಎಂಬ ಭಾವ ಮೂಡಿತು ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ.

ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದ ವಿಚಾರವಾಗಿ ಮಾತನಾಡಿದ ಧ್ರುವ ಸರ್ಜಾ, ಪತ್ನಿ ಪ್ರೇರಣಾ ಅವರೊಂದಿಗೆ ಖಾಸಗಿ ಆಸ್ಪತ್ರೆಗೆ ತೆರಳಿ ಮೇಘನಾ ಇದ್ದ ಕೊಠಡಿಗೆ ಆಗಮಿಸಿ ಮಗುವನ್ನು ಎತ್ತಿ ಸಂತಸ ವ್ಯಕ್ತಪಡಿಸಿದ್ದಾರೆ.

ಆ ನಂತ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣನಿಗೆ ಹಾಗೂ ಅತ್ತಿಗೆಗೆ ಗಂಡು ಮಗುವಾಗಿದೆ. ಅತ್ತಿಗೆ ಕೂಡ ಆರಾಮವಾಗಿದ್ದಾರೆ. ಎಲ್ಲರೂ ಅವರಿಗೆ ಆಶೀರ್ವಾದ ಮಾಡಬೇಕೆಂದು ಕರ್ನಾಟಕದ ಜನತೆಯಲ್ಲಿ ಕೇಳಿಕೊಳ್ಳುತ್ತೇನೆ. ಖುಷಿ ಹೆಚ್ಚಾಗಿದ್ದರಿಂದ ತುಂಬಾ ರೋಮಾಂಚನವಾಗಿತ್ತು. ಹೀಗಾಗಿ ಮಗುವನ್ನು ಕೈಯಲ್ಲಿ ಹಿಡಿದ ತಕ್ಷಣದ ಅನುಭವನ್ನು ಅಂದಾಜಿಸಲು ಸಾಧ್ಯವಾಗಲಿಲ್ಲ. ಆ ಫೀಲ್ ಗೊತ್ತಾಗಲಿಲ್ಲ ಎಂದು ಮಗುವನ್ನು ಮೊದಲು ಕೈಯಲ್ಲಿ ಹಿಡಿದಾಗಿನ ಅನುಭವವನ್ನು ಹಂಚಿಕೊಂಡಿದ್ದಾರೆ.

ಬೆಳ್ಳಿ ತೊಟ್ಟಿಲು ಖರೀದಿಸಿರುವುದು ಯಾರಿಗೂ ಗೊತ್ತಾಗಬಾರದು ಎಂದುಕೊಂಡಿದೆ. ಆದರೆ ಮಾಧ್ಯಮಗಳ ಮೂಲಕ ಬಹಿರಂಗವಾಯಿತು. ಮಗುವನ್ನು ಮೊದಲು ಕೈಯಲ್ಲಿ ಹಿಡಿದಾಗ ನಮ್ಮಣ್ಣನ ಜೊತೆಗೆ ಇದ್ದ ಫೀಲ್ ಆಯಿತು. ತುಂಬಾ ಖುಷಿಯಾಗಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮತ್ತು ಬರುವ ಔಷಧಿ ನೀಡಿ ನಟಿಯ ಮೇಲೆ ಅತ್ಯಾಚಾರ!

ಬೆಂಗಳೂರು : ಮತ್ತು ಬರುವ ಔಷಧಿ ಕುಡಿಸಿ ನಟಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಗರದಲ್ಲಿ…

ಚಿತ್ರಮಂದಿರಗಳಿಗೆ ನಿರ್ಬಂಧ ಬೇಡ : ಪುನೀತ್ ಮನವಿ

ಚಲನಚಿತ್ರ ಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ಮಾಡಿಕೊಡಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ನಟ ಈಗ ಟಾಪ್ ನಟರ ಪಟ್ಟಿಯಲ್ಲಿ ಮೊದಲಿಗ!

ಡಿಯರ್‌ ಕಾಮ್ರೇಡ್‌, ಟ್ಯಾಕ್ಸಿವಾಲ, ನೋಟಾ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸಾಧನೆ ಮಾಡಲಿಲ್ಲ. ಆದರೂ ಬಾಲಿವುಡ್ ನ ಕೆಲವು ನಾಯಕರನ್ನು ಮಣಿಸಿ ದೇವರಕೊಂಡ ಮುನ್ನುಗ್ಗುತ್ತಿದ್ದಾರೆ.

ಭಜರಂಗಿ-2 ಟೀಸರ್: ಅಭಿಮಾನಿಗಳು ಫುಲ್ ಖುಷ್

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 58ನೇ ಹುಟ್ಟು ಹಬ್ಬದ ಅಂಗವಾಗಿ ಭಜರಂಗಿ 2 ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ಸದ್ಯ ಟೀಸರ್ ಬಗ್ಗೆ ಅಭಿಮಾನಿಗಳು ಫುಲ್ ಖುಷಿ ಪಡುತ್ತಿದ್ದಾರೆ.