ತಿರುಚ್ಚಿ: ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ.

ಪುದುಕ್ಕೊಟ್ಟೈನಲ್ಲಿ ಇಂದು ವಿವಿಧ ಸರ್ಕಾರಿ ಕಲ್ಯಾಣ ಯೋಜನೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಲಸಿಕೆ ಬಳಕೆಗೆ ಸಿಕ್ಕ ಬಳಿಕ, ತಮಿಳುನಾಡು ಸರ್ಕಾರವು ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆ ನೀಡುತ್ತದೆ ಎಂದು ಹೇಳಿದ್ದಾರೆ.

ಈ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಅವಧಿಯಲ್ಲಿ ಸರ್ಕಾರ ಕೈಗೊಂಡ ಕ್ರಮಗಳು ಮತ್ತು ಜಾಗೃತಿ ಅಭಿಯಾನದ ಕುರಿತು ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಬಿಹಾರ ಉಪ ಚುನಾವಣೆ ಅಂಗವಾಗಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿರುವ ಬಿಜೆಪಿ, ತನ್ನ ಪ್ರಣಾಳಿಕೆಯಲ್ಲಿ ಉಚಿತ ಕೊರೊನಾ ಲಸಿಕೆ ನೀಡುವ ಕುರಿತು ಘೋಷಣೆ ಮಾಡಿತ್ತು. ಬಿಹಾರ ಬಿಜೆಪಿ ಬೆನ್ನಲ್ಲಿಯೇ ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷ ಕೂಡ ಅದೇ ಹಾದಿಯಲ್ಲಿಯೇ ಸಾಗಿದೆ.

Leave a Reply

Your email address will not be published. Required fields are marked *

You May Also Like

ಬಿಜೆಪಿಗೆ ಹೆಚ್ಚು ಸ್ಥಾನ: ರಾಜ್ಯಸಭೆಯಲ್ಲೂ ಬಿಜೆಪಿ ಮೇಲುಗೈ

ನವದೆಹಲಿ : ರಾಜ್ಯ ಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಮೇಲ್ಮನೆಯಲ್ಲಿ ಬಿಜೆಪಿಯು ತನ್ನ ಸಂಖ್ಯಾ…

ಬಂಜಾರ ಭಾಷೆ, ಸಂಸ್ಕೃತಿ ಉಳುವಿಗಾಗಿ ಸಮನ್ವಯ ಮಹಾಸಭೆ

ಉತ್ತರಪ್ರಭ ಸುದ್ದಿ ವಿಜಯಪುರ: ಜಿಲ್ಲೆಯ ಕೋಲ್ಹಾರ ತಾಲೂಕಿನ ಕೂಡಗಿ ತಾಂಡಾದ ಸದಾ ಸಮಾಜದ ಬಗ್ಗೆ ಚಿಂತಿಸುವ…

ಅನಾರೋಗ್ಯದಿಂದ ಮೃತಪಟ್ಟ ಪೊಲೀಸ್ ಪೇದೆಗೂ ಕೊರೊನಾ!

ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಪೇದೆಯೊಬ್ಬರು ಮೃತ ಪಟ್ಟಿದ್ದು, ಅವರಲ್ಲಿ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ ಚೀನಾ!

ವಾಷಿಂಗ್ಟನ್ : ಗಡಿಯಲ್ಲಿ ಚೀನಾ ರಾಷ್ಟ್ರದ ಉಪಟಳ ಮುಂದುವರೆದಿದೆ. ಚೀನಾ ಭಾರತದ ಮೇಲೆ ದಾಳಿ ಮಾಡುವ ಹುನ್ನಾರ ನಡೆಸುತ್ತಿದೆಯೇ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ್ದೆ ಈ ಸಂಶಯಕ್ಕೆ ಕಾರಣವಾಗುತ್ತಿದೆ.