ಬೆಂಗಳೂರು: ಪತಿಯು ಅಶ್ಲೀಲ ವಿಡಿಯೋ ನೋಡುವಂತೆ ಪೀಡಿಸುತ್ತಿದ್ದಾನೆ ಎಂದು ಆರೋಪಿಸಿ ಪತ್ನಿ ದೂರು ದಾಖಲಿಸಿರುವ ಘಟನೆ ನಡೆದಿದೆ. 

ಆರೋಪಿ ಪತಿ ಲತೀರ್ ರೆಹಮಾನ್ ವಿರುದ್ಧ ವೈದ್ಯೆಯೊಬ್ಬರು ದೂರು ದಾಖಲಿಸಿದ್ದಾರೆ. ಅಲ್ಲದೇ, ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದಾನೆ ಎಂದು ವೈದ್ಯೆ ಆರೋಪಿಸಿದ್ದಾರೆ.

ಅಶ್ಲೀಲ ವಿಡಿಯೋ ನೋಡುವಂತೆ ಪತಿ ಕಿರುಕುಳ ನೀಡುತ್ತಾನೆ ಎಂದು ಕಿರುಕುಳ ತಾಳಲಾರದೆ ಸಂತ್ರಸ್ತೆ ಬಸವನಗುಡಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಆರೋಪಿ ಲತೀರ್ ರೆಹಮಾನ್ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದಾನೆ.

ಲತೀರ್ ಅವರು ಕಳೆದ ವರ್ಷ ವೈದ್ಯೆಯನ್ನು ವಿವಾಹವಾಗಿದ್ದರು. ಆ ನಂತರ ವರದಕ್ಷಿಣೆಗಾಗಿ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಹೆಚ್ಚಿನ ವರದಕ್ಷಿಣೆಗಾಗಿ ಗಂಡನ ಮನೆಯವರು ನನ್ನ ಚಿನ್ನಾಭರಣ ಕಸಿದು ಹೊರದಬ್ಬಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಅಲ್ಲದೇ, ಈತ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಲ್ಲದೆ, ಅಶ್ಲೀಲ ವಿಡಿಯೋಗಳನ್ನು ನೋಡಿ, ನನಗೂ ನೋಡುವಂತೆ ಒತ್ತಾಯಿಸುತ್ತಿದ್ದ. ನಾನು ಒಪ್ಪದಿದ್ದಾಗ ಬಾಯಿಗೆ ಬಂದಂತೆ ಬೈಯುತ್ತಿದ್ದ. ಮಾತ್ರೆಗಳನ್ನು ತೆಗೆದುಕೊಳ್ಳುವುದನ್ನು ಪ್ರಶ್ನಿಸಿದ್ದಕ್ಕೆ ಜಗಳ ಮಾಡುತ್ತಿದ್ದ. ಅಲ್ಲದೆ ಬಕ್ರೀದ್ ಹಬ್ಬದ ಸಮಯದಲ್ಲಿ ಮನೆಯಿಂದ ಚಿನ್ನದ ಒಡವೆ ಹಾಗೂ ಹಣ ತರುವಂತೆ ಕಿರುಕುಳ ನೀಡುತ್ತಿದ್ದ. ಆಸ್ಪತ್ರೆಯಲ್ಲಿ ಕೆಲಸ ಮಾಡಿ ಹಣವನ್ನು ನಮಗೆ ನೀಡಬೇಕು ಎಂದು ಪತಿ ಕುಟುಂಬಸ್ಥರು ಬೆದರಿಕೆ ಹಾಕುತ್ತಿದ್ದರು.

ಅಲ್ಲದೇ, ಆತ ದುಬೈನಲ್ಲಿ ದುಬೈನಲ್ಲಿ ಬೆಟ್ಟಿಂಗ್ ಆಡುತ್ತಿದ್ದು, ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಈ ಕುರಿತು ಯಾರಿಗಾದರೂ ಹೇಳಿದರೆ ನಿನ್ನ ಜೀವನವನ್ನು ಹಾಳು ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಅಲ್ಲದೆ ನನ್ನ ಬಟ್ಟೆ, ದಾಖಲಾತಿಗಳ ಸಮೇತ ನನ್ನನ್ನು ರೂಮ್ ನಿಂದ  ಹೊರ ಹಾಕಿದ್ದರು. ತನ್ನ ಸ್ನೇಹಿತರಿಗೆ ನನ್ನ ಫೋಟೋ ಕಳುಹಿಸಿ ಕೆಟ್ಟ ಅಭಿಪ್ರಾಯ ಬರುವ ಹಾಗೆ ಅವಮಾನಿಸಿದ್ದಾನೆ ಎಂದು ಅವಮಾನಿಸಿದ್ದಾನೆ ಎಂದು ಆರೋಪಿಸಿದ್ದಾಳೆ.

Leave a Reply

Your email address will not be published. Required fields are marked *

You May Also Like

ಸಂವಿಧಾನದ ಸಮಗ್ರತೆ ಎತ್ತಿ ಹಿಡಿಯೋಣ: ಶಾಸಕ ಆರ್.‌ಬಸನಗೌಡ ತುರವಿಹಾಳ

ವರದಿ:ವಿಠ್ಠಲ ಕೇಳುತ್ ಮಸ್ಕಿ: ಜಾತ್ಯತೀತ, ಸಮಾನತೆಯ ಸಮಾಜ ನಿರ್ಮಾಣ ಗಣರಾಜ್ಯದ ಆಶಯವಾಗಿದ್ದು, ಇದನ್ನು ಸಕಾರಗೊಳಿಸುವ ಜವಬ್ದಾರಿ…

ಕೊರೊನಾ ಚಿಕಿತ್ಸಾ ವೆಚ್ಚಕ್ಕೆ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗಾಗಿ @CMofKarnataka ನಿಗದಿಪಡಿಸಿರುವ ವೆಚ್ಚದ ವಿವರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ. ಒಂದು…

ದಿಂಗಾಲೇಶ್ವರ ಶ್ರೀ ಆಕ್ಷೇಪಾರ್ಹ ಹೇಳಿಕೆಗೆ ಸಚಿವ ಸಿ.ಸಿ.ಪಾಟೀಲ ತೀವ್ರ ಖಂಡನೆ

ಉತ್ತರಪ್ರಭಆಲಮಟ್ಟಿ: ಅಸಂಖ್ಯ ಭಕ್ತರ ಆರಾಧ್ಯ ದೈವ ಗದುಗಿನ ತೋಂಟದ ಲಿಂಗೈಕ್ಯ ಡಾ. ಸಿದ್ದಲಿಂಗ ಶ್ರೀಗಳ ಜನ್ಮದಿನವನ್ನು…

ಅಧಿಕಾರಿಗಳ ಆತುರ: ನರೆಗಲ್ಲನಲ್ಲಿ ಅನಾಥವಾದ ಉದ್ಯಾನವನ..!

ಗದಗ ಜಿಲ್ಲೆಯ ನರೇಗಲ್ಲ ನಲ್ಲಿ ಅಧಿಕಾರಿಗಳ ಆತುರದ ನಿರ್ಧಾರದಿಂದ ಉದ್ಯಾನವನ ಇದ್ದು ಇಲ್ಲದಂತಾಗಿದೆ.