ಹುಬ್ಬಳ್ಳಿ: 165 ಜನ ವೈದ್ಯಕೀಯ ಸಿಬ್ಬಂದಿಗೆ ಮೆತ್ತಿಕೊಂಡ ಸೋಂಕು!

ಹುಬ್ಬಳ್ಳಿ: ಕೊರೊನಾ ಅಟ್ಟಹಾಸದ ಮಧ್ಯೆ ವೈದ್ಯಕೀಯ ಸಿಬ್ಬಂದಿಗೆ ಮಹಾಮಾರಿಯ ಭಯ ಇನ್ನಷ್ಟು ಹೆಚ್ಚಾಗುತ್ತಿದೆ.

ಸೋಂಕಿತರಿಗೆ ಚಿಕಿತ್ಸೆ ನೀಡಲು ವಾರಿಯರ್ಸ್ ಗಳಾಗಿರುವ ವೈದ್ಯಕೀಯ ಸಿಬ್ಬಂದಿಯನ್ನು ಕಾಡುತ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕೊರೊನಾ ವಾರ್ಡ್ ನಲ್ಲಿ ಈಗಾಗಲೇ 5 ಸಾವಿರಕ್ಕೂ ಅಧಿಕ ಜನರು ಸೋಂಕಿಗೆ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆ ನೀಡಿದ 165ಕ್ಕೂ ಹೆಚ್ಚು ವೈದ್ಯರು- ವೈದ್ಯಕೀಯ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.


ಇದರಿಂದಾಗಿ ಕೋವಿಡ್ ವಾರ್ಡ್ ನಲ್ಲಿ ಕಾರ್ಯನಿರ್ವಹಿಸಲು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಲು ಹಿಂದೇಟು ಹಾಕುವಂತಾಗಿದೆ. ಸಿಬ್ಬಂದಿಗೆ ಸೂಕ್ತ ನೆರವು ಸುರಕ್ಷತೆಯ ಕಿಟ್ ಗಳನ್ನ ಅವಶ್ಯಕತೆ ನೀಡುವುದು ಅವಶ್ಯವಾಗಿದೆ.

ಕಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಮಹಾಮಾರಿ ಕಾಡುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಸರ್ಕಾರ ಕಿಲ್ಲರ್ ಕೊರೊನಾ ವಿರುದ್ಧ ಹೋರಾಡುವ ವೈದ್ಯರು ವೈದ್ಯಕೀಯ ಸಿಬ್ಬಂದಿಗೆ ಇನ್ನಷ್ಟು ಸುರಕ್ಷತಾ ಕಿಟ್ ಗಳನ್ನ ನೀಡಿ ವಾರಿಯರ್ಸ್ ಗಳಿಗೆ ನೆರವು ನೀಡಲು ಮುಂದಾಗಬೇಕಿದೆ ಎಂಬ ಕೂಗು ಕೇಳಿ ಬರುತ್ತಿದೆ.

Exit mobile version