ಬಿಹಾರ ಹಾಳು ಮಾಡಿದ್ದು, ಯುಪಿಎ ಹಾಗೂ ಮೈತ್ರಿ – ಮೋದಿ!

ಬಿಹಾರ : ಯುಪಿಎ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಿಹಾರದಲ್ಲಿ ನಿತೀಶ್ ಕುಮಾರ್ ಸಿಎಂ ಆಗಿದ್ದರು. ಆದರೆ, ಅವರ ಪ್ರತಿಯೊಂದು ನಿರ್ಧಾರಗಳಿಗೆ ಕಾಂಗ್ರೆಸ್ ಅಡ್ಡಗಾಲು ಹಾಕಿತು. ಹೀಗಾಗಿ ರಾಜ್ಯ ಅಭಿವೃದ್ಧಿಯಿಂದ ಹಿಂದೆ ಉಳಿಯಬೇಕಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಅವರ ಆರ್ ಜೆಡಿ ಆಡಳಿತ ನಡೆಸಿದ 15 ವರ್ಷಗಳ ಅವಧಿಯಲ್ಲಿ ಕೊಲೆ, ಸುಲಿಗೆ, ದೌರ್ಜನ್ಯಗಳು ಸೇರಿದಂತೆ ಹಲವು ಅಪರಾಧಗಳು ನಡೆದಿವೆ. ಬಿಹಾರ ರಾಜ್ಯವನ್ನು ಅಭಿವೃದ್ಧಿಪಡಿಸಲು ನಿತೀಶ್ ಕುಮಾರ್‌ಗೆ ಯುಪಿಎ ಸರ್ಕಾರ ಸಹಕಾರ ನೀಡಿಲ್ಲ. ಬದಲಾಗಿ ಎಲ್ಲಾ ಕೆಲಸಗಳಲ್ಲಿಯೂ ಅಡ್ಡಗಾಲು ಹಾಕುತ್ತ ಬಂದಿದೆ ಎಂದು ಆರೋಪಿಸಿದ್ದಾರೆ.

ನಿತೀಶ್ ಕುಮಾರ್ ಸರಿಯಾದ ಸಮಯಕ್ಕೆ ಬಲಿಷ್ಠ ಕಾರ್ಯ ಮಾಡದಿದ್ದರೆ, ಇಷ್ಟೊತ್ತಿಗೆ ರಾಜ್ಯದಲ್ಲಿ ಕೊರೊನಾ ಆತಂಕ ದೊಡ್ಡ ಮಟ್ಟದಲ್ಲಿ ಎದುರಾಗಿರುತ್ತಿತ್ತು. ಪ್ರಾಣಹಾನಿ, ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದ್ದವು. ಎನ್ ಡಿಎ ಮೈತ್ರಿಕೂಟ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಿಹಾರ ಜನ ಅಪರಾಧ ಮತ್ತು ಭ್ರಷ್ಟಾಚಾರದಿಂದ ನಲುಗಿ ಹೋಗಿದ್ದರು. ಬಡವರಿಗೆ ಮೀಸಲಿಟ್ಟಿದ್ದ ಹಣ ಭ್ರಷ್ಟಾಚಾರಿಗಳ ಕೈಸೇರುತ್ತಿತ್ತು ಎಂದು ಆರೋಪಿಸಿದ್ದಾರೆ.

ಕೇಂದ್ರದಲ್ಲಿ ಯುಪಿಎ ಸರ್ಕಾರ ಆಡಳಿತದಲ್ಲಿದ್ದ ಸಂದರ್ಭದಲ್ಲಿ ಬಿಹಾರದಲ್ಲಿ ನಿತೀಶ್ ಕುಮಾರ್ ಸಿಎಂ ಆಗಿದ್ದರು. 1990ರಿಂದ 15 ವರ್ಷ ಆರ್‌ ಜೆಡಿ ಆಡಳಿತವಿತ್ತು. 2005ರಿಂದ ನಿತೀಶ್ ಕುಮಾರ್ ಬಿಹಾರದ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Exit mobile version