ನವದೆಹಲಿ : ಭಾರತೀಯ ಕ್ರಿಕೆಟ್ ನ ದಂತಕಥೆ ಕಪಿಲ್ ದೇವ್(61) ಅವರಿಗೆ ಹೃದಯಘಾತವಾಗಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಪತ್ರಕರ್ತೆ ಟೀನಾ ಠಾಕೂರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಕಪಿಲ್ ದೇವ್ ಅವರು ಇಲ್ಲಯವರೆಗೂ ಆರೋಗ್ಯವಾಗಿಯೇ ಇದ್ದರು. ಅಲ್ಲದೇ, ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಕುರಿತು ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದರು.

ಭಾರತ ತಂಡದ ಪರ 131 ಟೆಸ್ಟ್ ಪಂದ್ಯಗಳನ್ನು ಆಡಿರುವ ಕಪಿಲ್ ದೇವ್, 5,248 ರನ್ ಗಳಿಸಿದ್ದು, 8 ಶತಕಗಳನ್ನು ಸಿಡಿಸಿದ್ದಾರೆ. 225 ಏಕದಿನ ಪಂದ್ಯಗಳಲ್ಲಿ 3,783 ರನ್ ಗಳಿಸಿದ್ದಾರೆ. ಅಲ್ಲದೇ ಟೆಸ್ಟ್ ನಲ್ಲಿ 434 ವಿಕೆಟ್, ಏಕದಿನ ಮಾದರಿ ಕ್ರಿಕೆಟ್ನೊಲ್ಲಿ 253 ವಿಕೆಟ್ ಪಡೆದಿದ್ದಾರೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಕಪಿಲ್ ದೇವ್ ಅವರು ಗುಣಮುಖರಾಗಲಿ ಎಂದು ಹಲವು ಗಣ್ಯರು, ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕನ್ನಡಿಗನಿಗೆ ಒಲಿದು ಬರಲಿದೆಯೇ ಧೋನಿ ಸ್ಥಾನ!

ಮಹೇಂದ್ರಸಿಂಗ್ ಧೋನಿ ಅವರು ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಭಾರತೀಯ ತಂಡದ ವಿಕೇಟ್ ಕೀಪಿಂಗ್ ಬಗ್ಗೆ ಚರ್ಚೆಗಳು ಶುರುವಾಗಿದೆ. ಇದಕ್ಕೆ ಹತ್ತಾರು ಹೆಸರುಗಳು ಮುನ್ನೆಲೆಗೆ ಬಂದು ಚರ್ಚೆಗೆ ಕಾರಣವಾಗುತ್ತಿವೆ.

10 ರಂದು ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಆಲಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲ ವಯೋಮಾನದ ಗ್ರಾಮೀಣ ಕ್ರೀಡಾಸಕ್ತರಿಗಾಗಿ ದಿ,10 ರಂದು…

ಪಂಜಾಬ್ ವಿರುದ್ಧ ಸುಲಭವಾಗಿ ಗೆಲ್ಲಬಹುದಾದ ತಂಡ ಕೈಬಿಟ್ಟಿದ್ದಕ್ಕೆ ನಾಯಕ ಹೇಳಿದ್ದೇನು?

ದುಬೈ : ಪಂಜಾಬ್ ವಿರುದ್ಧ ಸುಲಭವಾಗಿ ಗೆಲ್ಲಬೇಕಾದ ಪಂದ್ಯವನ್ನು ಹೈದ್ರಾಬಾದ್ ಕೈ ಚೆಲ್ಲಿದೆ. ಹೀಗಾಗಿ ಟೀಕೆಗಳು ವ್ಯಕ್ತವಾಗುತ್ತಿವೆ.

ಹೈದರಾಬಾದ್ ತಂಡವನ್ನು ರೈಡ್ ಮಾಡಿ ಮೊದಲ ಜಯ ದಾಖಲಿಸಿದ ಕೋಲ್ಕತ್ತಾ!

ಶಾರ್ಜಾ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ತನ್ನ ಮೊದಲ…