ಬೆಂಗಳೂರು : ಕಾಲೇಜುಗಳನ್ನು ಪ್ರಾರಂಭಿಸಲು ದಿನಾಂಕ ನಿಗದಿ ಪಡಿಸಲಾಗಿದ್ದು, ಪಿಯು ಕಾಲೇಜು ಸದ್ಯಕ್ಕೆ ಆರಂಭ ಆಗುವುದಿಲ್ಲ ಎಂದು ಸರ್ಕಾರ ಹೇಳುತ್ತಿದೆ. 

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನ. 17ರಿಂದ ಎಲ್ಲ ಪದವಿ ಕಾಲೇಜುಗಳನ್ನು ಆರಂಭ ಮಾಡುವಂತೆ ತೀರ್ಮಾನಿಸಲಾಯಿತು. ಆದರೆ ಸಭೆಯಲ್ಲಿ ಪಿಯು ಕಾಲೇಜು ಆರಂಭದ ಬಗ್ಗೆ ಚರ್ಚೆಯಾಗಿಲ್ಲ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರುವಂತೆ ಒತ್ತಾಯ ಮಾಡುವಂತಿಲ್ಲ. ಇದಕ್ಕೆ ಪೋಷಕರ ಅನುಮತಿ ಕಡ್ಡಾಯವಾಗಿದೆ. ಒತ್ತಡ ಮಾಡುವ ಹಾಗಿಲ್ಲ. ದೀಪಾವಳಿ ಬಳಿಕ ರಾಜ್ಯದಲ್ಲಿ ಪದವಿ ಕಾಲೇಜು ಪ್ರಾರಂಭಕ್ಕೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ನ. 17ರಿಂದ ಎಂಜಿನಿಯರಿಂಗ್, ಡಿಪ್ಲೊಮಾ, ಪದವಿ ಕಾಲೇಜು ಪ್ರಾರಂಭ ಮಾಡಲು ನಿರ್ಧಾರ ಮಾಡಲಾಗಿದೆ. ಆದರೆ, ಪಿಯು ಕಾಲೇಜು ಮಾತ್ರ ಸದ್ಯಕ್ಕೆ ಓಪನ್ ಆಗುವುದಿಲ್ಲ. ಕಾಲೇಜಿಗೆ ಬರುವವರಿಗೆ ಇಲಾಖೆ ವ್ಯವಸ್ಥೆ ಮಾಡುತ್ತದೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೂ ಅಗತ್ಯ ಮುಂಜಾಗ್ರತಾ ಕ್ರಮದ ವ್ಯವಸ್ಥೆ ಮಾಡುವುದಾಗಿ ನಿರ್ಧರಿಸಲಾಗಿದೆ. 

ಪ್ರಾಕ್ಟಿಕಲ್ ತರಗತಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಯುಜಿಸಿ ನಿಯಮದ ಪ್ರಕಾರ ಕಾಲೇಜು ಪ್ರಾರಂಭ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಒತ್ತಾಸೆ ಮೇರೆಗೆ ಕಾಲೇಜು ಪ್ರಾರಂಭ ಮಾಡುವ ನಿರ್ಧಾರ ಸಭೆಯಲ್ಲಿ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಮುಳಗುಂದ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆ

ಸ್ಥಳೀಯ ಪಟ್ಟಣ ಪಂಚಾಯ್ತಿ ಸಭಾ ಭವನದಲ್ಲಿ ಮಂಗಳವಾರ ನಡೆದ ಪಂಚಾಯ್ತಿ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ 2021-22 ನೇ ಸಾಲಿನ ಬಜೆಟ್ ಮಂಡಿಸಿದರು.

ಮಹಾರಾಷ್ಟ್ರ ಸಿಎಂ ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ : ಬೆಳಗಾವಿ ನಮ್ಮದು. ಬೆಳಗಾವಿಯ ಒಂದಿಂಚು ಜಾಗ ಬಿಟ್ಟುಕೊಡಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಹಾರಾಷ್ಟ್ರ ಸಿಎಂ ಗೆ ನೀಡಿದ್ದಾರೆ.

ಪಿಎಸ್ ಐ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ರೌಡಿ ಶೀಟರ್!

ಹಾಸನ : ಜಿಲ್ಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿರುವ ಪೊಲೀಸರು ಬಂಧಿಸಿದ್ದಾರೆ.

ಇನ್ಮುಂದೆ ಕನ್ನಡದಲ್ಲೂ ಇಂಜನೀಯರಿಂಗ್ ಕಲಿಬಹುದಂತೆ!

ಅದೆಷ್ಟೋ ವಿದ್ಯಾರ್ಥಿಗಳಿಗೆ ನಾನು ಡಾಕ್ಟರ್ ಆಗಬೇಕು. ಇಂಜನೀಯರ್ ಆಗಬೇಕು ಎನ್ನುವ ಕನಸಿರುತ್ತೆ. ಆದರೆ ಅದರಲ್ಲಿನ ಇಂಗ್ಲೀಷ ಜ್ಞಾನದ ಕೊರತೆಯಿಂದ ಜನೀಯರಿಂಗ್ ಕಲಿಯಲು ಹಿಂದೇಟು ಹಾಕುವವರೇ ಬಹಳಷ್ಟು ಜನರಿದ್ದರು. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತಿತ್ತು. ಆದರೆ ಇದೀಗ ಇದೊಕ್ಕೊಂದು ಪರಿಹಾರ ಸಿಕ್ಕಿದೆ. ಮಾತೃಭಾಷೆಯಲ್ಲಿಯೂ ಇಂಜನೀಯರಿಂಗ್ ಮಾಡಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ.