ನವಾಡ : ರಾಹುಲ್ ಹಾಗೂ ತೇಜಸ್ವಿ ಯಾದವ್ ಜಂಟಿಯಾಗಿ ಪ್ರಧಾನಿ ಮೋದಿ ಹಾಗೂ ಬಿಹಾರದ ನಿತೀಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉದ್ಯೋಗ ಸೃಷ್ಟಿ ಮಾಡುವ ವಿಚಾರದಲ್ಲಿ ಬಿಹಾರ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರೇ ನೀವು ದೇಶವಾಸಿಗಳಿಗೆ ಸುಳ್ಳು ಹೇಳುವುದನ್ನು ಇನ್ನು ಮುಂದಾದರೂ ನಿಲ್ಲಿಸಿ. ಕಳೆದ ಚುನಾವಣೆಯಲ್ಲಿ ಬಿಹಾರದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದೀರಿ. ಆದರೆ, ಅಂಬಾನಿ ಹಾಗೂ ಅದಾನಿ ಬಳಗಕ್ಕಾಗಿ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಕೇಂದ್ರದ ಕೃಷಿ ವಿಧೇಯಕಗಳನ್ನೂ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಬಿಹಾರದಲ್ಲಿ ಮಂಡಿ, ಎಪಿಎಂಸಿ ಬಂದ್ ಮಾಡಿಸಿದ ಬಳಿಕ ಇದೀಗ ಇಡೀ ದೇಶಕ್ಕೆ ಅನ್ವಯಿಸುತ್ತಿದ್ಧಾರೆ. ಈ ಮೂಲಕ ಲಕ್ಷಾಂತರ ಉದ್ಯೋಗಗಳನ್ನು ಕಡಿತ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಸುಳ್ಳುಗಳನ್ನೇ ಹೇಳುತ್ತಿದ್ದಾರೆ ಎಂದು ರಾಹುಲ್ ಹರಿಹಾಯ್ದಿದ್ದಾರೆ.

Leave a Reply

Your email address will not be published. Required fields are marked *

You May Also Like

ಪೆಟ್ರೋಲ್-ಡಿಸೇಲ್ ದರ ಇಳಿಕೆಗೆ ಕೇಂದ್ರ ಸಚಿವೆ ನೀಡಿದ ಸಲಹೆ ಏನು?

ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿಚಾರ ಇದೊಂದು ದುಃಖಕರ ಸಂಗತಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೈಲ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಲಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಸಾಯುವ ಸಮಯವನ್ನು ನಟ ಸುಶಾಂತ್ ಮೊದಲೇ ನಿರ್ಧರಿಸಿದ್ದರೆ?

ಬೆಂಗಳೂರು: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಹಲವರ…

ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10118…