ನವಾಡ : ರಾಹುಲ್ ಹಾಗೂ ತೇಜಸ್ವಿ ಯಾದವ್ ಜಂಟಿಯಾಗಿ ಪ್ರಧಾನಿ ಮೋದಿ ಹಾಗೂ ಬಿಹಾರದ ನಿತೀಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉದ್ಯೋಗ ಸೃಷ್ಟಿ ಮಾಡುವ ವಿಚಾರದಲ್ಲಿ ಬಿಹಾರ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರೇ ನೀವು ದೇಶವಾಸಿಗಳಿಗೆ ಸುಳ್ಳು ಹೇಳುವುದನ್ನು ಇನ್ನು ಮುಂದಾದರೂ ನಿಲ್ಲಿಸಿ. ಕಳೆದ ಚುನಾವಣೆಯಲ್ಲಿ ಬಿಹಾರದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದೀರಿ. ಆದರೆ, ಅಂಬಾನಿ ಹಾಗೂ ಅದಾನಿ ಬಳಗಕ್ಕಾಗಿ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಕೇಂದ್ರದ ಕೃಷಿ ವಿಧೇಯಕಗಳನ್ನೂ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಬಿಹಾರದಲ್ಲಿ ಮಂಡಿ, ಎಪಿಎಂಸಿ ಬಂದ್ ಮಾಡಿಸಿದ ಬಳಿಕ ಇದೀಗ ಇಡೀ ದೇಶಕ್ಕೆ ಅನ್ವಯಿಸುತ್ತಿದ್ಧಾರೆ. ಈ ಮೂಲಕ ಲಕ್ಷಾಂತರ ಉದ್ಯೋಗಗಳನ್ನು ಕಡಿತ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಸುಳ್ಳುಗಳನ್ನೇ ಹೇಳುತ್ತಿದ್ದಾರೆ ಎಂದು ರಾಹುಲ್ ಹರಿಹಾಯ್ದಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್‌ ಡೌನ್..!

2020ರಲ್ಲಿ ಲಾಕ್‌ ಡೌನ್‌ ನಿಂದ ಬೇಸತ್ತ ಜನ ಈಗ ಮತ್ತದೇ ಲಾಕ್‌ ಡೌನ್‌ ಮೊರೆ ಹೋಗುವ ಅನಿವಾರ್ಯತೆ ಇದೆ. ಯಾಕೆಂದರೆ, ಬ್ರಿಟನ್‌ ನಲ್ಲಿ ಹೊಸ ರೂಪಾಂತರಿ ಕೊರೊನಾ ವೈರಸ್‌ ಹರಡುತ್ತಿದ್ದು, ಅಲ್ಲಿನ ಜನ ತ್ತರಿಸಿ ಹೋಗಿದ್ದಾರೆ. ಈಗಾಗಲೇ ಬ್ರಿಟನ್‌ ಅಲ್ಲದೇ, ಬೇರೆ ದೇಶಗಳಿಗೂ ಈ ವೈರಸ್‌ ಹಬ್ಬಿದ್ದು, ಭಾರತವೇನು ಹೊರತಾಗಿಲ್ಲ.

ಕೋರಾನಾ: ಭಾರತೀಯ ಔಷಧಿಗೆ ತಡೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ!

ಜಿನೆವಾ: ಕೊರೊನಾ ವೈರಸ್ ಗೆ ಪರಿಣಾಮಕಾರಿ ಮದ್ದು ಎನ್ನಲಾಗುತ್ತಿದ್ದ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧದ ವೈದ್ಯಕೀಯ ಪ್ರಯೋಗಕ್ಕೆ ವಿಶ್ವ…

ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿ ಕುರಿತು ಪರಿಶೀಲಿಸುವ ಚಿಂತನೆ ನಡೆದಿದೆ : ಪ್ರಧಾನಿ ಮೋದಿ

ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಹಲವು ಯೋಜನೆಗಳನ್ನು ಘೋಷಿಸಿದರು. ಇನ್ನು ಇದೇ ವೇಳೆ ದೇಶದ…

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ: ರಾಹುಲ್ ಟ್ವೀಟ್!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಡವಿದೆ ಎಂದು…