ಮಂಡ್ಯ : ಕಣ್ಣಿಗೆ ಖಾರದ ಪುಡಿ ಎರಚಿ ರೌಡಿ ಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ರೌಡಿ ಶೀಟರ್ ಪಾಲಹಳ್ಳಿ ಹರೀಶ್ ಕಳ್ಳಪಚ್ಚಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ಈ ಘಟನೆ ನಡೆದಿದೆ. ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು, ಕಣ್ಣಿಗೆ ಖಾರದ ಪುಡಿ ಎರಚಿ, ಆ ನಂತರ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಈ ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹರೀಶ್ ಮೃತದೇಹವನ್ನು ಪೊಲೀಸರು ಪರಿಶೀಲಿಸಿದ್ದಾರೆ. ಈ ಕುರಿತು ದೂರು ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಂಜನಾ, ರಾಗಿಣಿಗೆ ಬೇಲ್ ಬಾಂಬ್ ಪ್ರಕರಣದ ಹಿಂದಿನ ಸತ್ಯವೇನು?

ತುಮಕೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ಸಂಜನಾ ಹಾಗೂ ರಾಗಿಣಿ ಅವರ ಜಾಮೀನಿಗೆ ಸಂಬಂಧಿಸಿದಂತೆ ಎನ್‍ ಡಿಪಿಎಸ್ ಕೋರ್ಟ್ ನ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಹೊಸ ಟ್ವೀಸ್ಟ್ ಸಿಕ್ಕಿದೆ.

ಮಕ್ಕಳಿಗೆ ಕೊರೊನಾ ಚಿಕಿತ್ಸೆ ಬಗ್ಗೆ ಸರ್ಕಾರದ ಬಳಿ ಪ್ರೊಟೊಕಾಲ್ ಇಲ್ವಂತೆ – ಶಾಸಕ ಎಚ್.ಕೆ.ಪಾಟೀಲ್ ಆರೋಪ

ಗದಗ: ಸರ್ಕಾರಕ್ಕೆ ಎರಡನೇ ಅಲೆಯ ಬಗ್ಗೆಯೇ ಇನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂಥದ್ರಲ್ಲಿ ಮೂರನೇ ಅಲೆಯ ಬಗ್ಗೆ ಏನು ಸಿದ್ಧತೆ ಮಾಡಿಕೊಂಡಿಲ್ಲ. ಹಾವೇರಿ ಜಿಲ್ಲೆಯಲ್ಲಿ 721 ಮಕ್ಕಳಿಗೆ ಪಾಸಿಟಿವ್ ದೃಢಪಟ್ಟಿದೆ. ಆದರೆ ಈವರೆಗೆ ಸರ್ಕಾರದಿಂದ ಮಕ್ಕಳಿಗಾಗಿ ಚಿಕಿತ್ಸೆಯ ಪ್ರೊಟೊಕಾಲ್ ಬಂದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.

ಸೂರ್ಯಕಾಂತಿಗೆ ಕೋರಿ ಹುಳಗಳ ದಾಳಿ-ರೈತರು ಕಂಗಾಲು

ಉತ್ತರಪ್ರಭ ಸುದ್ದಿಆಲಮಟ್ಟಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೊಂಡಿರುವ ಸೂರ್ಯಕಾಂತಿ ಬೆಳೆ ಹುಲುಸಾಗಿ ಬೆಳೆದು ನಿಂತಿದೆ. ಹಚ್ಚು ಹಸಿರಾಗಿ…

ನರೆಗಲ್ ಗಾರ್ಡನ್ ಕಥೆ: 10 ಲಕ್ಷ ಖರ್ಚು ಮಾಡಿ 9 ವರ್ಷವಾದ್ರು, ಉಪಯೋಗಕ್ಕೆ ಬಾರದ ಉದ್ಯಾನವನ..!

ಗದಗ: ದೇವಾಲಯದ ಪಕ್ಕದಲ್ಲಿರುವ ಉದ್ಯಾನವನ ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಎನ್ನುವಂತಿದೆ. ಸರ್ಕಾರ…