ಬೆಂಗಳೂರು: ನಿನ್ನೆ ಸಂಜೆಯಿಂದ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ನಗರದ ಹೊಸಕೆರೆ ಹಳ್ಳಿ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಹದಗೆಟ್ಟಿದೆ.

ಹೊಸಕೆರೆಹಳ್ಳಿಯಲ್ಲಿ ವೃಷಭಾವತಿ ಕಾಲುವೆಗೆ ಸಂಪರ್ಕಿಸುವ ಬೃಹತ್ ರಾಜಕಾಲುವೆಯ ಕಾಮಗಾರಿಗಾಗಿ ನೀರಿನ ದಿಕ್ಕನ್ನು ಬದಲಾಯಿಸಲಾಗಿದೆ. ನೀರಿನ ದಿಕ್ಕನ್ನು ಬದಲಿಸಿದ ಪರಿಣಾಮ ಭಾರೀ ಪ್ರಮಾಣದ ನೀರು ಒಮ್ಮೆಲೆ ನುಗ್ಗಿ ಬಂದಿದೆ. ಪರಿಣಾಮ ರಾಜಕಾಲುವೆ ಸಮೀಪದ ಮನೆಗಳು, ಕಟ್ಟಡಗಳು ಜಲಾವೃತಗೊಂಡಿವೆ. ಈ ಭಾಗದಲ್ಲಿ ಅಂದಾಜು 350ಕ್ಕೂ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುತ್ತಿದ್ದಾರೆ. 

ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು ಹಿಂಭಾಗದ ರಾಜಕಾಲುವೆ ಪಕ್ಕದ ರಸ್ತೆಯಲ್ಲಿಯೇ ನದಿಯಂತೆ ರಭಸವಾಗಿ ನೀರು ಹರಿದ ಪರಿಣಾಮ ಮಾರುತಿ ಸ್ವಿಫ್ಟ್ ಕಾರೊಂದು ಕೊಚ್ಚಿಕೊಂಡು ಹೋಯಿತು. ದತ್ತಾತ್ರೇಯನಗರ ಒಂದರಲ್ಲಿಯೇ 300ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. 

ಇಲ್ಲಿನ ಬಡಾವಣೆಗಳ ಮನೆ, ಅಪಾರ್ಟ್’ಮೆಂಟ್ ಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡಿದರು. ಹೊಸಕೆರೆಹಳ್ಳಿಯಲ್ಲಿ ಜನರು ಕಟ್ಟಡಗಳ ಮೇಲೆ ಆಶ್ರಯ ಪಡೆದಿದ್ದರು. ನೆಲಮಹಡಿಯಲ್ಲಿ ಸಿಲುಕಿದ್ದವರನ್ನು ಅಗ್ನಿಶಾಮಕ ತಂಡ ಹಾಗೂ ಎಸ್’ಡಿಆರ್ಎಫ್ ಸಿಬ್ಬಂದಿ ಬೋಟ್ ಮೂಲಕ ರಕ್ಷಣೆ ಮಾಡಿದರು, ಹೊಸಕೆರೆಹಳ್ಳಿ ದತ್ತಾತ್ರೇಯ ದೇವಾಲಯವೂ ಮುಳುಗಿದೆ. 

ಅ.21 ರಂದು ಸುರಿದ ಮಳೆಯಿಂದಾಗಿ ಹೊಸಕೆರೆಹಳ್ಳಿ ಗುರುದತ್ತ ಲೇಔಟ್ನಲ್ಲಿ ರಾಜಕಾಲುವೆ ಕುಸಿದು ಅವಾಂತರ ಸೃಷ್ಟಿಯಾಗಿತ್ತು. 

Leave a Reply

Your email address will not be published. Required fields are marked *

You May Also Like

ರೈತ ವಿರೋಧಿ ಕಾಯ್ದೆಗಳು ತಕ್ಷಣವೇ ರದ್ದು ಮಾಡಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಗುರುವಾರ ರೈಲ್ ರೋಕೋ ಚಳುವಳಿಯನ್ನು ಮಾಡುವ ಮೂಲಕ ರೈತರು ಪ್ರತಿಭಟನೆ ನಡೆಸಿದರು.

ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ!

ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ಕುರಿತು ಆರೋಗ್ಯ…

ಮೂಲಭೂತ ಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ರಾಮಣ್ಣ

ಲಕ್ಷ್ಮೇಶ್ವರ: ಸರಕಾರದ ಮೂಲಕ ಅನುದಾನ ತಂದು ಎಲ್ಲಾ ನಾಗರಿಕರಿಗೂ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ…

ಡಾ.ಸಂಕನಗೌಡರ ಸಾಹಿತ್ಯದಿಂದ ಸಮಾಜ ಸುಧಾರಣೆ

ಸಾಮಾನ್ಯವಾಗಿ ವೈದ್ಯ, ವಕೀಲ, ಪೋಲೀಸ ಮೊದಲಾದ ಒತ್ತಡಭರಿತ ವೃತ್ತಿಯಲ್ಲಿ ಇರುವವರು ಕಥೆ, ಕಾದಂಬರಿ, ಕವಿತೆ, ನಾಟಕ, ಸಂಗೀತ, ಸಾಹಿತ್ಯ ಮೊದಲಾದವುಗಳಿಂದ ದೂರವಿರುತ್ತಾರೆ. ದೈನಂದಿನ ವೃತ್ತಿಯ ಒತ್ತಡ ಹಾಗೂ ಮತ್ತಿತರ ಕಾರಣಗಳಿಂದ ಸಾಹಿತ್ಯಾಭ್ಯಾಸದಿಂದ ದೂರವಿರುತ್ತಾರೆ ಅಥವಾ ಸಾಹಿತ್ಯವನ್ನು ಕಡೆಗಣಿಸಿರುತ್ತಾರೆ.