ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ನ ಶ್ರೀರಕ್ಷೆ ಇದೆ – ಹೊರಟ್ಟಿ!

ಚಿಕ್ಕಬಳ್ಳಾಪುರ : ಬಿಜೆಪಿಯ ಹೈಕಮಾಂಡ್ ತಮ್ಮ ಅಭಿಪ್ರಾಯವನ್ನು ಯತ್ನಾಳ್ ಅವರ ಮೂಲಕ ಹೇಳಿಸುತ್ತಿದೆ ಎಂದು ಶಾಸಕ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನ ಶ್ರೀರಕ್ಷೆ ಇರುವುದರಿಂದಲೇ ಯತ್ನಾಳ್ ಈ ರೀತಿ ಮಾತನಾಡುತ್ತಿದ್ದಾರೆ. ಯತ್ನಾಳ್ ಅವರಿಗೆ ಇರುವ ಧೈರ್ಯ ಬಿಜೆಪಿಯ ಮತ್ತೊಬ್ಬ ನಾಯಕನಲ್ಲಿ ಇಲ್ಲ. ಹೀಗಾಗಿ ಅವರ ವಿರುದ್ಧ ಬಿಜೆಪಿ ನಾಯಕರು ಕ್ರಮ ಕೈಗೊಳ್ಳಲು ಆಗುತ್ತಿಲ್ಲ. ಈ ರೀತಿ ಬೇರೆ ಯಾರಾದರೂ ಮಾತನಾಡಿದರೆ ಪಕ್ಷದಿಂದ ಉಚ್ಛಾಟನೆ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕದವರು 100 ಶಾಸಕರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸುತ್ತಾರೆ. ಆದರೆ, ಉಳಿದ ಭಾಗದಲ್ಲಿ ಕೇವಲ 15 ಶಾಸಕರು ಬಿಜೆಪಿಯಿಂದ ಗೆದ್ದು ಅವರಲ್ಲೇ ಒಬ್ಬರು ಸಿಎಂ ಆಗುತ್ತಾರೆ. ಹೀಗಾಗಿ ಉತ್ತರ ಕರ್ನಾಟಕ ಭಾಗದ ವ್ಯಕ್ತಿಯನ್ನು ಸಿಎಂ ಮಾಡುವ ಅವಶ್ಯಕತೆ ಇದೆ ಎಂದು ಯತ್ನಾಳ್ ಹೇಳಿದ್ದರು.

ಯಾರ ಬೆಂಬಲವೂ ಇಲ್ಲದೆ ಸಿಎಂ ಬದಲವಾಣೆ ಕುರಿತು ಮಾತನಾಡಲು ಬರುವುದಿಲ್ಲ. ಯತ್ನಾಳ್ ಅವರಿಗೆ ಉತ್ತರ ಕರ್ನಾಟಕದವರನ್ನೇ ಸಿಎ ಮಾಡಲಾಗುತ್ತದೆ ಎಂದು ಹೇಳಿರಬಹುದು. ಹೀಗಾಗಿ ಅಷ್ಟು ಗಟ್ಟಿಯಾಗಿ ಸಿಎಂ ಬದಲಾವಣೆ ಕುರಿತು ಹೇಳಿತ್ತಿದ್ದಾರೆ. ಮುಂದೆ ಯತ್ನಾಳ್ ಅವರೇ ಸಿಎಂ ಅಗಬಹುದು ಎಂದು ಹೊರಟ್ಟಿ ಹೇಳಿದ್ದಾರೆ.

ಈ ಹೇಳಿಕೆ ವಿರೋಧಿಸಿದ ಸಚಿವ ಕೆ.ಎಸ್. ಈಶ್ವರಪ್ಪ, ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು. ಯತ್ನಾಳ್ ಉತ್ತರನ ಪೌರುಷನಂತೆ ಮೂರ್ಖತನದ ಹೇಳಿಕೆ ನೀಡಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದ್ದರು.

Exit mobile version