ಮಡಿಕೇರಿ: ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತನಾಡಲಿ ಎಂದು ಕಟೀಲ್ ಸವಾಲು ಹಾಕಿದ್ದಾರೆ.
ಮಡಿಕೇರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾಕ್ಕೆ ಲಸಿಕೆ ಬಂದ ಸಂದರ್ಭದಲ್ಲಿ ಆತ್ಮನಿರ್ಭರ ಭಾರತ್ ಅಡಿಯಲ್ಲಿ ರಾಜ್ಯಗಳಿಗೆ ತಲುಪಿಸುವುದು ನಮಗೆ ಗೊತ್ತಿದೆ. ಅದೇ ರೂಪದಲ್ಲಿ ನಾವು ಪ್ರತಿಯೊಂದು ರಾಜ್ಯಗಳಿಗೂ ತಲುಪಿಸುತ್ತೇವೆ. ಇದನ್ನು ಯಾರಿಂದಲೂ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಸಂಸ್ಕಾರ ಹಾಗೂ ಸಂಸ್ಕೃತಿಯಿಂದ ಮಾತನಾಡಲಿ. ಚುನಾವಣೆಯಲ್ಲಿ ಸೋಲಿನ ಭಯದಿಂದ ಅವರು ಈ ರೀತಿಯಾಗಿ ಮಾತನಾಡುತ್ತಿದ್ದಾರೆ. ಆದರೆ, ಆ ಎರಡೂ ಕ್ಷೇತ್ರಗಳಲ್ಲಿಯೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಹೇಳಿದ್ದಾರೆ.