ಅಬುಧಾಬಿ : ಮ್ಯಾಚ್ ವಿನ್ನರ್ ಧೋನಿ ಐಪಿಎಲ್ ಗೂ ನಿವೃತ್ತಿ ಘೋಷಿಸಲಿದ್ದಾರೆಯೇ ಎಂಬ ಸಂಶಯ ಮೂಡುತ್ತಿದೆ. ಹಾಗಂತ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡುತ್ತಿದ್ದಾರೆ.

ಧೋನಿ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಅವರು ತಮ್ಮ ಜೆರ್ಸಿಯನ್ನು ಗಿಫ್ಟ್ ನೀಡಿದ್ದಾರೆ. ಹೀಗಾಗಿ ಎಲ್ಲರೂ ಸಂಶಯದ ರೂಪದಲ್ಲಿ ಮಾತುಗಳನ್ನು ಮಾತನಾಡುತ್ತಿದ್ದಾರೆ.

ಧೋನಿ ಅವರು ಈ ಹಿಂದೆ ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರ ಜಾಸ್ ಬಟ್ಲರ್ ಅವರಿಗೆ ತಮ್ಮ ಜರ್ಸಿ ಗಿಫ್ಟ್ ನೀಡಿದ್ದರು. ಈ ಸಂದರ್ಭದಲ್ಲಿ ಧೋನಿ ಅವರು 200ನೇ ಪಂದ್ಯ ಆಡಿದ್ದರು. ಹೀಗಾಗಿ ಅಭಿಮಾನಿಗಳು ಇದಕ್ಕೆ ತಲೆ ಕೆಡಿಸಿಕಂಡಿರಲಿಲ್ಲ. ಆದರೆ ಪಾಂಡ್ಯ ಸಹೋದರರು ಸೇರಿದಂತೆ ಹಲವು ಆಟಗಾರರಿಗೆ ಧೋನಿ ಪಂದ್ಯದ ಬಳಿಕ ತಮ್ಮ ಜರ್ಸಿಯನ್ನು ಗಿಫ್ಟ್ ನೀಡುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಸದ್ಯ ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿರುವ 11 ಪಂದ್ಯಗಳನ್ನು ಆಡಿದ್ದು, ಹೀನಾಯ ಪ್ರದರ್ಶನ ತೋರುತ್ತಿದೆ. ಕೇವಲ ಮೂರು ಪಂದ್ಯಗಳಲ್ಲಿ ಮಾತ್ರ ಇದು ಗೆದ್ದಿದೆ. ಹೀಗಾಗಿ ಚೆನ್ನೈ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಈ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಲು ಧೋನಿ ವಿಫಲರಾಗುತ್ತಿದ್ದಾರೆ. ಹೀಗಾಗಿ ಧೋನಿ ಐಪಿಎಲ್ ಗೂ ಗುಡ್ ಬೈ ಹೇಳಬಹುದು ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಈ ಹಿಂದೆ ಕೂಡ ಧೋನಿ ಅವರು ಯಾರೂ ಊಹೆ ಮಾಡದ ರೀತಿಯಲ್ಲಿ ಅಂತಾರಾ,ಟ್ರೀಯ ಪಂದ್ಯಗಳಿಗೆ ಗುಡ್ ಬೈ ಹೇಳಿದ್ದರು. ತಮ್ಮ 16 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದ ಧೋನಿ, ಐಪಿಎಲ್‍ ನಲ್ಲಿ ಮಾತ್ರ ಭಾಗವಹಿಸಿದ್ದರು. ಆದರೆ, ಸದ್ಯ ಅದಕ್ಕೂ ವಿದಾಯ ಹೇಳುವ ಸಾಧ್ಯತೆ ಇದೆ ಎಂಬ ಚರ್ಚೆ ಶುರುವಾಗಿದೆ.

Leave a Reply

Your email address will not be published. Required fields are marked *

You May Also Like

ದೇಶದ ಅತ್ಯನ್ನತ ಕ್ರೀಡಾ ಪ್ರಶಸ್ತಿಗಳ ಪಟ್ಟಿ ಪ್ರಕಟ

ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರಗಳಾದ ರಾಜೀವ್ ಗಾಂಧಿ ಖೇಲ್ ರತ್ನ, ಅರ್ಜುನ, ದ್ರೋಣಾಚಾರ್ಯ, ಧ್ಯಾನ್ ಚಂದ್, ತೇನ್ ಸಿಂಗ್ ರಾಷ್ಟ್ರೀಯ ಸಾಹಸ ಕ್ರೀಡೆ ಪ್ರಶಸ್ತಿಗಳ ಪಟ್ಟಿ ಬಿಡುಗಡೆಯಾಗಿದ್ದು, ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಸೇರಿದಂತೆ ಹಲವರು ಪ್ರಶಸ್ತಿ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಕೆ. ಎಚ್. ಪಾಟೀಲ ಫುಟಬಾಲ್ ಲೀಗ್-2022 ಉದ್ಘಾಟನೆ

ಉತ್ತರಪ್ರಭ ಸುದ್ದಿ ಗದಗ: ಕರ್ನಾಟಕ ಸ್ಫೋರ್ಟ್ಸ್ ಆ್ಯಂಡ್ ಎಜ್ಯುಕೇಶನ್ ಅಕ್ಯಾಡೆಮಿ ಗದಗ ಇವರ ವತಿಯಿಂದ ಕೆ.…

ಇಂದಿನ ಪಂದ್ಯದಲ್ಲಿ ಆರ್ ಸಿಬಿ, ರಾಜಸ್ಥಾನವನ್ನು ಮಣಿಸಲಿದೆಯೇ?

ಬೆಂಗಳೂರು : ಪ್ರಸಕ್ತ ಸಾಲಿನ ಐಪಿಎಲ್ ಕದನದಲ್ಲಿ ಬೆಂಗಳೂರು ತಂಡವು ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಹರ್ಭಜನ್ ಸಿಂಗ್ ವಿರುದ್ಧ ಚೆನ್ನೈ ಅಭಿಮಾನಿಗಳೇಕೆ ಕಿಡಿ ಕಾರುತ್ತಿದ್ದಾರೆ?

ಮುಂಬಯಿ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯದ ಸಂದರ್ಭದಲ್ಲಿ ಸನ್‍ ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ನಡೆದ ಪಂದ್ಯದ ಸಂದರ್ಭದಲ್ಲಿ ಅಂಪೈರ್ ವೈಡ್ ನೀಡಲು ಮುಂದಾಗಿ ಧೋನಿ, ಆಕ್ಷೇಪಿಸುತ್ತಿದ್ದಂತೆ ತೀರ್ಮಾನ ಬದಲಿಸಿದ್ದ ಘಟನೆ ಸದ್ಯ ಚೆರ್ಚೆಗೆ ಕಾರಣವಾಗಿದೆ.