ಜೈಪುರ : ಅಪ್ರಾಪ್ತ ಬಾಲಕಿಯರನ್ನು ದೇಹ ವ್ಯಾಪಾರಕ್ಕೆಂದು ಕರೆ ತಂದಿದ್ದ ತಂಡದ ಮೇಲೆ ಪೊಲೀಸರು ದಾಳಿ ನಡೆಸಿದ್ದು, 21 ಅಪ್ರಾಪ್ತೆಯರನ್ನು ರಕ್ಷಿಸಿದ್ದಾರೆ.

ಈ ಘಟನೆ ದೋಲ್ಪುರ ಜಿಲ್ಲೆಯ ಧೀಮರಿ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಜಿಲ್ಲಾ ವರಿಷ್ಠಾಧಿಕಾರಿ ಅವರು ಮಹಿಳಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕುರಿತು ಮಹಿಳಾ ಸಿಬ್ಬಂದಿ ಮಾರುವೇಷದಲ್ಲಿ ಗ್ರಾಮದ ಜನರೊಂದಿಗೆ ಮಾತನಾಡಿ ಹಲವು ಮಾಹಿತಿ ಪಡೆದುಕೊಳ್ಳುತ್ತಿರುವಾಗ ಈ ವಿಷಯ ಬಹಿರಂಗವಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಎಸ್ಪಿ ಕೇಸರ್ ಸಿಂಗ್ ಅವರು ದಾಳಿ ನಡೆಸಿದ್ದರು.

ದಾಳಿಯಲ್ಲಿ 21 ಅಪ್ರಾಪ್ತೆಯರನ್ನು ರಕ್ಷಿಸಿದ್ದಾರೆ. ಎಲ್ಲರನ್ನು ರಿಮ್ಯಾಂಡ್ ಹೋಮ್ ನಲ್ಲಿ ಇರಿಸಲಾಗಿದ್ದು, ಸೋಮವಾರ ಬಾಲಕಿಯರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಕೇಸರ್ ಸಿಂಗ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ದೇಶದಲ್ಲಿ ಕೊರೊನಾ ಕಸ ಸೃಷ್ಟಿಯಾಗಿದ್ದು ಎಷ್ಟು ಗೊತ್ತಾ?

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದರಿಂದಾಗಿ ಆಸ್ಪತ್ರೆಯಲ್ಲಿ ಕೂಡ ತ್ಯಾಜ್ಯ ಹೆಚ್ಚಾಗುತ್ತಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ದೇಶದಲ್ಲಿ 18 ಸಾವಿರಕ್ಕೂ ಅಧಿಕ ಟನ್ ವೈದ್ಯಕೀಯ ತ್ಯಾಜ್ಯ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.

ಪ್ರಧಾನಿ ಕಚೇರಿಯ ಆದೇಶಕ್ಕೂ ಇಲ್ಲಿ ಸಿಗುತ್ತಿಲ್ಲ ಗೌರವ!

ಚಿತ್ರದುರ್ಗ : ರಾಜ್ಯ ಸೇರಿದಂತೆ ದೇಶದಲ್ಲಿನ ಇನ್ನೂ ಹಲವು ಗ್ರಾಮಗಳು ಅಭಿವೃದ್ಧಿಯಿಂದ ಹಿಂದೆ ಉಳಿದಿವೆ. ಕೆಲವು ಗ್ರಾಮಗಳಲ್ಲಿನ ಪರಿಸ್ಥಿತಿಗಳಂತೂ ಹೇಳತೀರದಾಗಿದೆ.

ಡಿಸಿಎಂ ಸವದಿ ಹೇಳಿಕೆಯಿಂಮಹಾರಾಷ್ಟ್ರದಲ್ಲಿ ಮೂಡಿದ ಸಂಚಲನ

ನಮಗೆ ಮುಂಬೈ ಮೇಲೆ ಹಕ್ಕು ಇದೆ. ಮುಂಬೈಯನ್ನು ರಾಜ್ಯಕ್ಕೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಿದ್ದು, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸುವು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಕೋವಿಡ್ ನಿಂದ ಮೃತ ಪಟ್ಟ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ಪರಿಹಾರ

ಲಖನೌ: ಕೋವಿಡ್-19 ವೇಳೆ ಕರ್ತವ್ಯ ನಿಷ್ಠೆ ಮೆರೆದು ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.