ಬೆಂಗಳೂರು : ರಾಜ್ಯದಲ್ಲಿ ಇಂದು 4,439 ಜನರು ಸೋಂಕಿಗೆ ಒಳಗಾಗಿದ್ದಾರೆ. ಅಲ್ಲದೇ, ಇಂದು ಆಸ್ಪತ್ರೆಯಿಂದ 10,106 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೇ, ಇಂದು 32 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 

ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,02,817ಕ್ಕೆ ಏರಿಕೆ ಕಂಡಿದೆ. ಈ ಪೈಕಿ 7,10,843 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 81,050 ಸಕ್ರಿಯ ಪ್ರಕರಣಗಳಿವೆ. ನಿನ್ನೆ ಕೂಡ ರಾಜ್ಯದಲ್ಲಿ 4,471 ಜನರಲ್ಲಿ ಸೋಂಕು ಕಾಣಿಸಿಕೊಂಡಿತ್ತು. 

ಸೋಂಕಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ 10,905 ಜನ ಸಾವನ್ನಪ್ಪಿದ್ದು, 939 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಇಂದು ಬೆಂಗಳೂರಿನಲ್ಲಿ 2,468, ಬೆಂಗಳೂರು ಗ್ರಾಮಾಂತರ 234, ತುಮಕೂರು 141, ಮೈಸೂರು 140, ದಕ್ಷಿಣ ಕನ್ನಡ 139 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ 432, ಬಳ್ಳಾರಿ 61, ಹಾಸನ 44, ಚಾಮರಾಜನಗರದಲ್ಲಿ 38 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಕಪ್ಪತಗುಡ್ಡಕ್ಕೆ ಬೆಂಕಿ: ಗಿಡ ಮರಗಳು ಸುಟ್ಟು ಭಸ್ಮ

ಉತ್ತರಪ್ರಭ ಸುದ್ದಿಗದಗ: ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಅರಣ್ಯ ತಡೆಯಲು ವಿಫಲವಾಗಿದೆ, ಅರಣ್ಯ ಇಲಾಖೆಯ…

ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಸೂಚನೆ: ಡಿಸಿ ಎಂ.ಸುಂದರೇಶ್ ಬಾಬು

ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕೆರೆಗಳ ಗಡಿ ಗುರುತಿಸಿ, ಅತಿಕ್ರಮಣವಾದ ಕೆರೆಗಳನ್ನು ನವೆಂಬರ್ ತಿಂಗಳ ಅಂತ್ಯದೊಳಗಾಗಿ ತೆರವುಗೊಳಿಸಿ ಉದ್ಯಾನವನ (ಪ್ಲಾಂಟೇಷನ್) ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಪಿಡಿಒಗಳಿಗೆ ಸೂಚನೆ ನೀಡಿದರು.

ಕಾರ್ಪೊರೇಟರ್ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್ ಇರ್ಮಾನ್ ಪಾಷಾ ವಿರುದ್ಧ ಎಫ್ಐ ಆರ್ ದಾಖಲಾಗಿದೆ. ಜೆಜೆ ನಗರ ಪೊಲೀಸ್…

ಹಳ್ಳಿ ಹಕ್ಕಿಯನ್ನು ತಬ್ಬಲಿ ಮಾಡಿತೆ ಬಿಜೆಪಿ..?

ಬೆಂಗಳೂರು: ಮೇಲ್ಮನೆಗೆ ನಡೆಯುವ ಚುನಾವಣೆಗೆ ಬಿಜೆಪಿ ತಡರಾತ್ರಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇಂದು ನಾಲ್ವರು…