ಸೈನಿಕರಿಗಾಗಿ ದೀಪ ಬೆಳಗಿಸಿ ಹಬ್ಬ ಆಚರಿಸಿ – ಮೋದಿ!

ನವದೆಹಲಿ : ಸೈನಿಕರ ಹೆಸರಿನಲ್ಲಿ ದೀಪ ಹಚ್ಚಿ ಪೂಜೆ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

ಮನ್ ಕೀ ಬಾತ್ ನಲ್ಲಿ ದೇಶ ಉದ್ಧೇಶಿಸಿ ಮಾತನಾಡಿದ ಅವರು, ಸೈನಿಕರು ಹಾಗೂ ಭದ್ರತಾ ಪಡೆಗಳೊಂದಿಗೆ ಭಾರತವು ಯಾವಾಗಲೂ ಇರುತ್ತದೆ. ನಮ್ಮ ಯೋಧರು ದೇಶಕ್ಕಾಗಿ ತಮ್ಮ ಕುಟುಂಬಗಳನ್ನು ತೊರೆದು ದೇಶ ಸೇವೆ ಮಾಡುತ್ತಿರುತ್ತಾರೆ. ವಿದೇಶಗಳ ಬೆದರಿಕೆಗಳಿಂದ ದೇಶವನ್ನು ಕಾಯುವ ಮೂಲಕ ನಮ್ಮನ್ನು ರಕ್ಷಿಸುತ್ತಿದ್ದಾರೆ. ಹೀಗಾಗಿ ಅವರನ್ನು ನೆನೆದು ದೀಪ ಹಚ್ಚಿ ಬೆಳಗಿಸಿ ಎಂದು ಕರೆ ನೀಡಿದ್ದಾರೆ. 

ಈ ಸಂದರ್ಭದಲ್ಲಿ ಈದ್ ಹಾಗೂ ದೀಪಾವಳಿ ಸೇರಿದಂತೆ ಹಲವು ಹಬ್ಬಗಳು ಬರುತ್ತವೆ. ಇಂತಹ ಸಂದರ್ಭದಲ್ಲಿ ಹಬ್ಬದ ಹಂಗಿಲ್ಲದೆ ನಮ್ಮನ್ನು ರಕ್ಷಿಸುತ್ತಿರುವವರನ್ನು ನೆನೆಯುವುದು ಅನಿವಾರ್ಯವಾಗಿದೆ ಎಂದು ಮನವಿ ಮಾಡಿದ್ದಾರೆ. 

ಸಿಕ್ಕಿಂ ಹಾಗೂ ಅರುಣಾಚಲ ಪ್ರದೇಶ ಸೇರಿದಂತೆ ಚೀನಾದ ಸುಮಾರು 3,500 ಕಿ.ಮೀ ಉದ್ದದ ಗಡಿಯಲ್ಲಿ ಸೈನ್ಯ ಹಾಗೂ ಶಸ್ತ್ರಾಸ್ತ್ರಗಳನ್ನು ಗಮನಾರ್ಹ ರೀತಿಯಲ್ಲಿ ಬಲಪಡಿಸಲಾಗಿದೆ. ಲಡಾಖ್ನದಲ್ಲಿ ಉದ್ವಿಗ್ನತೆ ತಲೆದೋರಿದೆ. ಹಲವು ರೀತಿಯಲ್ಲಿ ಮಾತುಕತೆಗಳು ನಡೆದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರತಿಯೊಬ್ಬರೂ ಸಂಯಮದಿಂದಲೇ ಹಬ್ಬ ಆಚರಿಸಬೇಕು. ವಸ್ತುಗಳನ್ನು ಕೊಳ್ಳುವಾಗ ದೇಶೀಯ ವಸ್ತುಗಳ ಬಗ್ಗೆ ಗಮನ ಹರಿಸಿ, ಸ್ಥಳೀಯ ವ್ಯಾಪಾರಿಗಳೊಂದಿಗೆ ವ್ಯವಹಾರ ಮಾಡುವುದನ್ನು ರೂಢಿ ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. 

Exit mobile version