ವಿಜಯಪುರ: ಪೋಷಕರ ಎದುರೇ ಯುವತಿ ಭೀಮಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಳು ಹಿಂಡುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಐಶ್ವರ್ಯ ಶ್ರೀಪಾಲ ಕಬ್ಬಿನ(20) ಎಂದು ಗುರುತಿಸಲಾಗಿದೆ. ಮೃತ ಯುವತಿ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ನಿವಾಸಿಯಾಗಿದ್ದಾರೆ. ಐಶ್ವರ್ಯಾ ತನ್ನ ಕುಟುಂಬಸ್ಥರ ಜೊತೆ ಗಾಣಗಾಪುರ ದತ್ತಾತ್ರೆಯ ದೇವಸ್ಥಾನಕ್ಕೆ ತೆರಳುತ್ತಿದ್ದಳು. ಈ ಸಂದರ್ಭದಲ್ಲಿ ವಿಜಯಪುರದ ಆಲಮೇಲ ಮತ್ತು ಕಲಬುಗಿಯ ಅಫಜಲಪುರ ತಾಲೂಕು ನಡುವೆ ಭೀಮಾನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಬಳಿ ಬರುತ್ತಿದ್ದಂತೆಯೇ ವಾಹನ ನಿಲ್ಲಿಸಿದ್ದಾಳೆ.

ನಾಣ್ಯ ಎಸೆಯುವ ನೆಪದಲ್ಲಿ ನದಿಗೆ ಹಾರಿದ್ದಾಳೆ. ಕಣ್ಣಮುಂದೆಯೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಆದರೆ, ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

You May Also Like

ಮುಂಡರಗಿ: ರಸ್ತೆಯ ತುಂಬ ನೀರೋ.. ನೀರು..!

ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮುಂಟರಗಿ ಪಟ್ಟಣದಲ್ಲಿ ರಸ್ತೆಯ ತುಂಬೆಲ್ಲ ನೀರು ತುಂಬಿಕೊಂಡ ದೃಶ್ಯಗಳು ಸಾಮಾನ್ಯವಾಗಿದೆ.

ಶಾಸಕ ಬಂಡಿ ಅವರಿಗೆ ಎಸ್‌ಎಫ್‌ಐ ಮನವಿ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಒತ್ತಾಯ

ಗಜೇಂದ್ರಗಡ: ಪಟ್ಟಣದ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಹಾಗೂ ಸರಕಾರಿ ಬಾಲಕರ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭಿಸಲು ಸೇರಿದಂತೆ ಇನ್ನಿತರ ಶೈಕ್ಷಣಿಕ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಕಾರ್ಯಕರ್ತರು ಶಾಸಕರಿಗೆ ಮನವಿ ಸಲ್ಲಿಸಿದರು.

ಮರಗಳಿಗೆ ಕತ್ತರಿ: ಅರಣ್ಯಾಧಿಕಾರಿಗಳ ಅಮಾನತು

ಬಾಳೂರು ಮೀಸಲು ಅರಣ್ಯ ಪ್ರದೇಶದಲ್ಲಿ ಮಾಫಿ ಪಾಸ್ ಹೆಸರಲ್ಲಿ ಕಾಡುಗಳ ಮರಗಳನ್ನು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಅರಣ್ಯ ಇಲಾಖೆ ನೌಕರರನ್ನು ಅಮಾನತುಗೊಳಿಸಲಾಗಿದೆ. ಚಿಕ್ಕಮಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ ಪವಾರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ತಿಮ್ಮಾಪೂರ : ರೈತ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ತಿಮ್ಮಾಪೂರ ಗ್ರಾಮ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ರೈತ ನಾಯಕ ಪ್ರೋ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿ.ಆರ್.ನಾರಾಯಣರಡ್ಡಿ ಬಣದ ಸಂಘಕ್ಕೆ ತಾಲ್ಲೂಕಿನ ತಿಮ್ಮಾಪೂರ ಗ್ರಾಮ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.