ನವದೆಹಲಿ: ದೇಶದ ಎಲ್ಲ ಜನರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಹೇಳಿ ಎಲ್ಲ ಟೀಕೆಗಳಿಗೂ ಸ್ಪಷ್ಟನೆ ನೀಡಿದ್ದಾರೆ.

ಚುನಾವಣೆಯಲ್ಲಿ ಗೆದ್ದರೆ, ಬಿಹಾರದ ಜನರಿಗೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ಕಳೆದ ವಾರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಹೇಳಿದ್ದರು. ಈ ಹೇಳಿಕೆಯಿಂದ ದೇಶದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದವು.

ಹಲವಾರು ನಾಯಕರು ಹಾಗೂ ರಾಜಕೀಯ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿದ್ದವು.

ದೇಶದಲ್ಲಿ ಒಬ್ಬರಿಗೆ ಲಸಿಕೆ ನೀಡಲು ರೂ. 500 ಖರ್ಚು ಮಾಡಲಾಗುವುದು. ಹೀಗಾಗಿ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಪ್ರತಾಪ್ ಚಂದ್ರ ಸಾರಂಗಿ ಹೇಳಿದ್ದಾರೆ.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ಜನರಿಗೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ಘೋಷಿಸಿದ್ದಾರೆ. ಪ್ರತಿ ವ್ಯಕ್ತಿಗೆ ಲಸಿಕೆ ಹಾಕಲು ರೂ. 500 ವ್ಯಯಿಸಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಿಹಾರ ಹಾಳು ಮಾಡಿದ್ದು, ಯುಪಿಎ ಹಾಗೂ ಮೈತ್ರಿ – ಮೋದಿ!

ಬಿಹಾರ : ಯುಪಿಎ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಿಹಾರದಲ್ಲಿ ನಿತೀಶ್ ಕುಮಾರ್ ಸಿಎಂ ಆಗಿದ್ದರು. ಆದರೆ, ಅವರ ಪ್ರತಿಯೊಂದು ನಿರ್ಧಾರಗಳಿಗೆ ಕಾಂಗ್ರೆಸ್ ಅಡ್ಡಗಾಲು ಹಾಕಿತು. ಹೀಗಾಗಿ ರಾಜ್ಯ ಅಭಿವೃದ್ಧಿಯಿಂದ ಹಿಂದೆ ಉಳಿಯಬೇಕಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಜಗತ್ತಿನಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 2.33 ಲಕ್ಷ

ಲಂಡನ್ : ಜಗತ್ತಿನಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ಈ ಮಹಾಮಾರಿಗೆ 2.33 ಲಕ್ಷ ಜನ ಬಲಿಯಾಗಿದ್ದಾರೆ.…

ತಮಿಳುನಾಡಿನಲ್ಲಿ ಉಚಿತ ಕೊರೊನಾ ಲಸಿಕೆ ವಿತರಣೆ – ಸಿಎಂ ಘೋಷಣೆ!

ತಿರುಚ್ಚಿ : ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ.

ಇನ್ನು ಮುಂದೆ ವಾಟ್ಸಪ್ ಮೂಲಕವೂ ಹಣ ವರ್ಗಾಯಿಸಬಹುದು!

ನವದೆಹಲಿ : ದೇಶದಲ್ಲಿನ ವಾಟ್ಸಪ್ ಬಳಕೆದಾರರಿಗೆ ಆ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ವಾಟ್ಸಪ್ ಬಳಕೆದಾರರು ಇದರ ಮೂಲಕ ಹಣ ವರ್ಗಾಯಿಸಬಹುದಾಗಿದೆ. ಇದಕ್ಕೆ ಈಗಾಗಲೇ ರಾಷ್ಟ್ರೀಯ ಪಾವತಿ ನಿಗಮ(ಎನ್ ಪಿಸಿಐ) ಅನುಮೋದನೆ ನೀಡಿದೆ.