ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಶೆಟ್ಟರ್

jagadeesh shettar hubballi

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಶೆಟ್ಟರ್

ಹುಬ್ಬಳ್ಳಿ: ವಿಧಾನ ಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತವಿಲ್ಲ. ಸರ್ಕಾರ ಸುಸೂತ್ರವಾಗಿ ನಡೆಯಲು ಎರಡು ಕಡೆ ಬಹುಮತ ಅಗತ್ಯ. ಪರಿಷತ್‌ನ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಒಡೆದ ಮನೆಯಾಗಿದೆ. ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಶುರುವಾಗಿದೆ. ಡಿಕೆಶಿ ಹಿಂಬಾಲಕರ ಮೂಲಕ ಮುಂದಿನ ಸಿಎಂ ಡಿಕೆಶಿ ಎಂದು ಹೇಳಿಕೆ ಕೊಡಿಸುತ್ತಿದ್ದಾರೆ. ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ ಕಾಂಗ್ರೆಸ್ ತುಂಬಾ ಕೆಳ ಹಂತಕ್ಕೆ ಹೋಗಿದೆ. ಜೆಡಿಎಸ್ ಸಂಪೂರ್ಣ ನೆಲಕಚ್ಚಿ ಹೋಗಿದೆ. ಬಸನಗೌಡ ಪಾಟೀಲ್ ಯತ್ನಾಳರದ್ದು ವಯಕ್ತಿಕ ಹೇಳಿಕೆ, ಅದರ ಬಗ್ಗೆ ನಾನು ಮಾತನಾಡಲ್ಲ. ಯತ್ನಾಳ ಹೇಳಿಕೆಯನ್ನು ಪಕ್ಷ ಗಮನಿಸುತ್ತಿದೆ. ರಾಜ್ಯಾಧ್ಯಕ್ಷರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.

Exit mobile version