ಬೆಳಗಾವಿ: ಹಳೆ ವೈಷಮ್ಯ ಹಿನ್ನೆಲೆ ಮಾರಕಾಸ್ತçಗಳಿಂದ ಕೊಚ್ಚಿ ರೌಡಿಯ ಬರ್ಬರ ಹತ್ಯೆ ಮಾಡಿದ ಘಟನೆ ಬೆಳಗಾವಿಯ ಗ್ಯಾಂಗ್‌ವಾಡಿಯಲ್ಲಿ ತಡರಾತ್ರಿ ನಡೆದಿದೆ.

ನಿನ್ನೆ ರಾತ್ರಿ 11 ಗಂಟೆಗೆ ಶೆಹಬಾಜ್ ಪಠಾಣ್ ಅಲಿಯಾಸ್ ಶೆಹಬಾಜ್ ರೌಡಿ ಬರ್ತ್ ಡೇ ಪಾರ್ಟಿ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಶೆಹಬಾಜ್ ಪಠಾಣ್‌ನ್ನು ಹತ್ಯೆ ಮಾಡಲಾಗಿದೆ.

ಈ ವೇಳೆ ಟಾಟಾ ಸುಮೋ ವಾಹನದಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೋಡೆದು ಬೈಕ್‌ನಿಂದ ಬಿದ್ದ ಶೆಹಬಾಜ್‌ನನ್ನು ಬೆನ್ನಟ್ಟಿದ್ದ ದುಷ್ಕರ್ಮಿಗಳು ಹತ್ಯೆ ಗೈದಿದ್ದಾರೆ.

ಈ ವೇಳೆ ನಿವೃತ್ತ ಡಿವೈಎಸ್‌ಪಿ ಮನೆಗೆ ನುಗ್ಗಿದ್ದ ಶೆಹಬಾಜ್ ಪಠಾಣ್, ನಿವೃತ್ತ ಡಿವೈಎಸ್‌ಪಿ ಸಮ್ಮುಖದಲ್ಲಿಯೇ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.

ಕೈಯಲ್ಲಿ ಮಾರಕಾಸ್ತ ಹಿಡಿದು ಬೆನ್ನಟ್ಟುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೋಲಿಸರು ತೀವ್ರ ಶೋಧ ನೆಡೆಸಿದ್ದಾರೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮುರುಡಿ ಗ್ರಾಮಕ್ಕೆ 93.33% ರಷ್ಟು ಫಲಿತಾಂಶ

ಉತ್ತರಪ್ರಭ ಮುಂಡರಗಿ: ತಾಲ್ಲೂಕಿನ ಮುರುಡಿಯ ಸರಕಾರಿ ಪ್ರೌಢ ಶಾಲೆಯ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ…

ಕಂಡಕ್ಟರ್, ಡ್ರೈವರ್ ಗಳನ್ನು ಟಾರ್ಗೇಟ್ ಮಾಡಿದ್ರಾ ಡಿಪೋ ಮ್ಯಾನೇಜರ್..?

ಇದೀಗ ಡಿಪೋ ಮ್ಯಾನೇಜರ್ ಬಸಪ್ಪ ಪೂಜಾರ್ ಅವರ ವರ್ತನೆ ಮತ್ತೊಂದು ಯಡವಟ್ಟಿಗೆ ಕಾರಣವಾಗಿದೆ. ನಿನ್ನೆ ಘಟನೆ ನಂತರ ಇದೀಗ ಸಿಬ್ಬಂಧಿಗಳನ್ನು ಡಿಪೋ ಮ್ಯಾನೇಜರ್ ಟಾರ್ಗೆಟ್ ಮಾಡಿದ್ದಾರೆಯೇ? ಎನ್ನುವ ಪ್ರಶ್ನೆ ಉದ್ಭವವಾಗಿದೆ.

ನಾಳೆ ರಾಜ್ಯ ಬಂದ್ ಏನಿರುತ್ತೆ..? ಏನಿರಲ್ಲ..?

ಮಾರಾಟ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಕೆಲವು ಸೇವೆಗಳು ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇರುತ್ತದೆ. ಇದರೊಂದಿಗೆ ಖಾಸಗಿ ಬಸ್, ಪ್ರಯಾಣಿಕರ ವಾಹನಗಳು, ಸರ್ಕಾರಿ ಕಚೇರಿ, ಮೆಟ್ರೋ ಸೇವೆ, ಆಸ್ಪತ್ರೆ ಮೆಡಿಕಲ್ ಸ್ಟೋರ್, ಅಂಬುಲೆನ್ಸ್, ರೈಲು ಸಂಚಾರ, ಹೋಟೆಲ್, ಹಣ್ಣು ತರಕಾರಿ ವ್ಯಾಪಾರ ಮೊದಲಾದವು ಇರುತ್ತವೆ.