ಹೈದರಾಬಾದ್ : ನಟಿ ಕಾಜಲ್ ಅಗರ್ವಾಲ್ ಅವರು ಸದ್ಯದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ತಮ್ಮ ಕಾಜಲ್ ಅವರು ಇಲ್ಲಿಯವರೆಗೂ ತಮ್ಮ ಭಾವಿ ಪತಿಯನ್ನು ಪರಿಚಯಿಸಿರಲಿಲ್ಲ. ನಟಿ ಇದೀಗ ಅವರ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಭಾವಿ ಪತಿಯೊಂದಿಗಿನ ಫೋಟೋವನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಕಾಜಲ್, ನಮ್ಮ ಕಡೆಯಿಂದ ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ತಮ್ಮ ಭಾವಿ ಪತಿಯೊಂದಿಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಕಾಜಲ್ ಹಂಚಿಕೊಂಡಿದ್ದಾರೆ. ಸದ್ಯ ಕಾಜಲ್ ಮತ್ತು ಗೌತಮ್ ಫೋಟೋಗೆ ಅಭಿಮಾನಿಗಳಿಂದ ಹಾರೈಕೆ ಸಿಗುತ್ತಿದೆ. 

ಇತ್ತೀಚೆಗೆ ಕಾಜಲ್ ಉಂಗುರವನ್ನು ತೋರಿಸುತ್ತಿರುವ ಕೈ ಬೆರಳಿನ ವಿಡಿಯೋ ಇನ್ಸ್ಟಾಗ್ರಾಮ್ ನಲ್ಲಿ ವೈರಲ್ ಆಗಿತ್ತು. ಉಂಗುರ ತೋರಿಸಿ ಸೂಪರ್ ಎಂದು ಹೇಳಿರುವ ವಿಡಿಯೋ ಎಲ್ಲಾ ಕಡೆ ಹರಿದಾಡಿತ್ತು. ನಿಶ್ಚಿತಾರ್ಥದ ಬಳಿಕ ಕಾಜಲ್ ಎಲ್ಲಿಯೂ ಉಂಗುರ ರಿವೀಲ್ ಮಾಡಿರಲಿಲ್ಲ.

ಕಾಜಲ್ ಅಗರ್ವಾಲ್ ಮದುವೆ ಆಗುತ್ತಿರುವ ಗೌತಮ್ ಕಿಚ್ಲು, ಡಿಸರ್ನ್ ಲಿವಿಂಗ್ ಸಂಸ್ಥೆಯ ಸ್ಥಾಪಕರು. ಇನ್ನು ಗೌತಮ್ ತಮ್ಮ ಇನ್ಸ್ಟಾ ಗ್ರಾಂನಲ್ಲಿ ತಾವು ಓರ್ವ ಇಂಟಿರೀಯರ್ ಡಿಸೈನರ್, ಡಿಸರ್ನ್ ಲಿವಿಂಗ್ ಸ್ಥಾಪಕ ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ರಾಜವೀರಮದಕರಿ ನಾಯಕ ಚಿತ್ರಿಕರಣಕ್ಕೆ ಸಿದ್ಧತೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಮತ್ತೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕೊರೋನಾದಿಂದಾಗಿ ಸಿನಿಮಾ ಚಿತ್ರಿಕರಣ ಅರ್ಧಕ್ಕೇ ಸ್ಥಗಿತಗೊಂಡಿತ್ತು. ಆಗಸ್ಟ್ ಅಷ್ಟೊತ್ತಿಗೆ ಚಿತ್ರಿಕರಣಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿಂದ ಚಿತ್ರತಂಡ ಚಿತ್ರಿಕರಣದ ತಯಾರಿ ನಡೆಸಿದೆ. ಕೊರೊನಾ ಕಾರಣದಿಂದ ಹಲವು ಮುಂಜಾಗೃತ ಕ್ರಮಗಳ ಮೂಲಕ ಸರ್ಕಾರ‌ ಚಿತ್ರಿಕರಣಕ್ಕೆ ಅನುಮತಿ ನೀಡಿದರೆ ಚಿತ್ರಿಕರಣ ಆರಂಭಿಸುವ ತಯಾರಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇದ್ದಾರೆ.

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ನಮ್ಮ ಜೀವನದ ಕಣಕಣದಲ್ಲಿಯೂ ದೇಶಭಕ್ತಿ ಜಾಗೃತವಾಗಿರಬೇಕು: ನಟ ದರ್ಶನ್

ಸ್ವಾತಂತ್ರ್ಯ ದಿನಾಚರಣೆಯ ಈ ಸುಸಂದರ್ಭದಲ್ಲಿ ನಟ ದರ್ಶನ್ ನಾಡಿನ ಜನತೆಗೆ ಟ್ವೀಟ್ ಮಾಡಿದ್ದಾರೆ. ಬೆಂಗಳೂರು: ದೇಶದಲ್ಲಿ…

ಅಭಿಮಾನಿಗಳಲ್ಲಿ ಗೋಲ್ಡನ್ ಸ್ಟಾರ್ ಮನವಿ ಮಾಡಿದ್ದೇನು?

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಜು. 2ರಂದು ಗೋಲ್ಡನ್…