ಮುಂಬಯಿ : ನಟಿ ಮಾಳವಿ ಮಲ್ಹೋತ್ರಾ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಿರುವ ಘಟನೆ ನಡೆದಿದೆ.

ನಿರ್ಮಾಪಕ ಎಂದು ಹೇಳಿಕೊಂಡಿರುವ ಯೋಗೇಶ್ ಎಂಬ ಹೆಸರಿನ ವ್ಯಕ್ತಿ ನಟಿಯ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ನಟಿಯನ್ನು ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಳವಿ ಹಾಗೂ ಯೋಗೇಶ್ ಫೇಸ್ ಬುಕ್ ನಲ್ಲಿ ಸ್ನೇಹಿತರಾಗಿದ್ದರು. ಯೋಗೇಶ್, ನಟಿಯ ಮುಂದೆ ಪ್ರೀತಿಯ ಪ್ರಸ್ತಾಪ ಇಟ್ಟಿದ್ದ. ಇದಕ್ಕೆ ನಟಿ ತಿರಸ್ಕರಿಸಿದ್ದರು. ಹೀಗಾಗಿಯೇ ಹಲ್ಲೆ ನಡೆಸಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ನಟಿ ಪ್ರಾಣಕ್ಕೆ ಯಾವುದೇ ತೊಂದರೆಯಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಯೋಗೇಶ್ ಮತ್ತು ಮಾಳವಿ ಮಧ್ಯೆ ಒಳ್ಳೆಯ ಸ್ನೇಹವಿತ್ತು ಎನ್ನಲಾಗಿದ್ದು, ಆದ್ರೆ ಯೋಗೇಶ್ ಒನ್ ಸೈಡ್ ಲವ್ ನಲ್ಲಿ ಇದ್ದ ಎಂದು ತಿಳಿದು ಬಂದಿದೆ.

ಚಾಕು ಹಾಕಿ ಸ್ಥಳದಿಂದ ಆರೋಪಿ ಯೋಗೇಶ್ ಪರಾರಿಯಾಗಿದ್ದಾನೆ ಎಂದು ಮಾಳವಿ ಮಲ್ಹೋತ್ರಾ ದೂರು ಸಲ್ಲಿಸಿದ್ದಾರೆ. ಕೊಲೆ ಯತ್ನದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳೀಯ ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದು ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ.

ವರ್ಷದ ಹಿಂದೆ ಮದುವೆಯಾಗಿದ್ದ ಯೋಧ ಹುತಾತ್ಮ – ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ನವದೆಹಲಿ : ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದ ಯೋಧ ಉಗ್ರರನ್ನು ಸೆದೆಬಡಯುವ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ – ಸರ್ಕಾರ!

ನವದೆಹಲಿ: ಕೇಂದ್ರ ಸರ್ಕಾರದ ನೂತನ ಲಾಕ್ಡೌನ್ ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ…

ಆನ್ ಲೈನ್ ತರಗತಿ ಹಾಜರಿಗೆ ವೈಫಲ್ಯ: ಆತ್ಮಹತ್ಯೆ ದಾರಿ ಹಿಡಿದ ವಿದ್ಯಾರ್ಥಿನಿ

9ನೇ ತರಗತಿ ವಿದ್ಯಾರ್ಥಿನಿ ಮಲಪ್ಪುರಂ ಜಿಲ್ಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಪ್ರತಿಕ್ರಿಯಿಸಿರುವ ಕುಟುಂಬಸ್ಥರು, ಆನ್ ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದೇ ಇರುವ ಕಾರಣಕ್ಕೆ ತೀವ್ರವಾಗಿ ತಳಮಳಕ್ಕೀಡಾಗಿ ಇಂತಹ ಕೃತ್ಯಕ್ಕೆ ಶರಣಾಗಿದ್ದಾಳೆ ಎಂದಿದ್ದಾರೆ. ಇವರು ಪರಿಶಿಷ್ಟ ಜಾತಿಗೆ ಸೇರಿದ್ದಾರೆ ಎಂದು ವರದಿಯಾಗಿದೆ.