ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು 4 ಸಾವಿರಕ್ಕಿಂತಲೂ ಕಡಿಮೆ ಜನರಲ್ಲಿ ಮಹಾಮಾರಿ ಕಾಣಿಸಿಕೊಂಡಿದೆ.

ಇಂದು ರಾಜ್ಯದಲ್ಲಿ 3,691 ಹೊಸ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ, ಇಂದು 7,740 ಜನ ಕೊರೊನಾದಿಂದ ಗುಣಮುಕರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಅಲ್ಲದೇ, 44 ಜನ ಕೊರೊನಾಗೆ ಬಲಿಯಾಗಿದ್ದಾರೆ. 

ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,09,638ಕ್ಕೆ ಏರಿಕೆ ಕಂಡಿದೆ. ಈ ಪೈಕಿ 7,27,298 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇನ್ನೂ 71,330 ಸಕ್ರಿಯ ಪ್ರಕರಣಗಳಿವೆ. ಸೋಮವಾರ ಕೂಡ 3,130 ಜನರಲ್ಲಿ ಸೋಂಕು ಕಾಣಿಸಿಕೊಂಡಿತ್ತು. 

ಮಹಾಮಾರಿಗೆ ಇಲ್ಲಿಯವರೆಗೂ ರಾಜ್ಯದಲ್ಲಿ ಇಲ್ಲಿಯವರೆಗೆ 10,991 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, 944 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಂಗಳೂರು ನಗರದಲ್ಲಿ 1,874, ದಕ್ಷಿಣ ಕನ್ನಡ 122, ಹಾಸನ 114, ಮೈಸೂರು 188, ವಿಜಯಪುರ 128, ಮಂಡ್ಯ 123 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 

Leave a Reply

Your email address will not be published. Required fields are marked *

You May Also Like

ವೈದ್ಯಾಧಿಕಾರಿ ಆತ್ಮಹತ್ಯೆಗೆ ಕಾರಣರಾದವರನ್ನು ಶಿಕ್ಷಿಸಿ: ಡಿ.ಕೆ.ಶಿವಕುಮಾರ್

ಆತ್ಮಹತ್ಯೆ ಮಾಡಿಕೊಂಡಿರುವ ವೈದ್ಯಾಧಿಕಾರಿ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ದುಡ್ಡು ನೀಡುವುದರಿಂದ ಅವರಿಗೆ ನ್ಯಾಯ ಸಿಗುವುದಿಲ್ಲ. ಆತ್ಮಹತ್ಯೆಗೆ ಕಾರಣರಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒತ್ತಾಯಿಸಿದರು.

ಮುಂಬಯಿನ ಮೀನು ಮಾರುಕಟ್ಟೆಯಿಂದ ಬಂದ ಕೊರೊನಾ!

ಮುಂಬಯಿನ ಮೀನದ ಮಾರುಕಟ್ಟೆಯಲ್ಲಿ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡಿ ಮರಳಿ ಬಂದಿದ್ದ ಜಿಲ್ಲೆಯ 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇಂಧನ ದರ ಏರಿಕೆ ವಿರೋಧಿಸಿ ಸೈಕಲ್ ಏರಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬೆಂಗಳೂರು: ಕಳೆದ 15 ದಿನಗಳಿಂದ ನಿರಂತರವಾಗಿ ದೇಶಾದ್ಯಂತ ಇಂಧನ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ…

ಅರಣ್ಯಗಳ ಅಂಚಿನಲ್ಲಿ 650 ಕಿ.ಮೀ ರೈಲ್ವೆ ಬ್ಯಾರಿಕೇಡ್ ಹಾಕುವ ಗುರಿ : ಅರಣ್ಯ ಸಚಿವ ಆನಂದ್ ಸಿಂಗ್

ಕಾಡಂಚಿನ ಗ್ರಾಮಗಳಲ್ಲಿ ಪದೆ ಪದೇ ಜಾನುವಾರಗಳ ಮೇಲೆ ಹುಲಿ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಇಂದು ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದರು.