ಬೆಂಗಳೂರು : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ಮಾಡಿರುವ ಸಿಸಿಬಿ ಪೊಲೀಸರು ಇಬ್ಬರು ಬುಕ್ಕಿಗಳನ್ನು ವಶಕ್ಕೆ ಪಡೆದಿದ್ದಾರೆ.

ಹೊಯ್ಸಳ ಗೌಡ(48), ನರಸಿಂಹ ಮೂರ್ತಿ(38) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳಿಂದ ಸಿಸಿಬಿ ಪೊಲೀಸರು ರೂ. 13.5 ಲಕ್ಷ ನಗದು ಹಾಗೂ 2 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಸಿಕ್ಕ ನಂತರ, ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ, ಹಣ ವಶಕ್ಕೆ ಪಡೆದಿದ್ದಾರೆ. ಈ ಕುರಿತು ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ ಚೀನಾ!

ವಾಷಿಂಗ್ಟನ್ : ಗಡಿಯಲ್ಲಿ ಚೀನಾ ರಾಷ್ಟ್ರದ ಉಪಟಳ ಮುಂದುವರೆದಿದೆ. ಚೀನಾ ಭಾರತದ ಮೇಲೆ ದಾಳಿ ಮಾಡುವ ಹುನ್ನಾರ ನಡೆಸುತ್ತಿದೆಯೇ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ್ದೆ ಈ ಸಂಶಯಕ್ಕೆ ಕಾರಣವಾಗುತ್ತಿದೆ.

ದೇಶದಲ್ಲಿ ತನ್ನ ಅಟ್ಟಹಾಸ ಮುಂದುವರೆಸಿದೆ ಮಹಾಮಾರಿ!

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದರೂ ಆತಂಕ ಮಾತ್ರ ಇನ್ನೂ ನಿಂತಿಲ್ಲ.

ರಾಜ್ಯದ 2 ಜಿಲ್ಲೆಗಳು ಸೇರಿದಂತೆ ದೇಶದ 25 ಜಿಲ್ಲೆಗಳಲ್ಲಿಯೇ ಮಹಾಮಾರಿಗೆ ಬಲಿಯಾದವರ ಪ್ರಮಾಣ ಶೇ. 48ರಷ್ಟು!

ನವದೆಹಲಿ : ದೇಶದಲ್ಲಿ ಆರಂಭದಲ್ಲಿ ಕೊರೊನಾ ಅಟ್ಟಾಹಸವನ್ನು ಕಟ್ಟಿ ಹಾಕಿದ್ದರೂ ಆ ನಂತರ ಅದು ತನ್ನ ವ್ಯಾಪ್ತಿ ಮೀರುತ್ತಿದೆ. ಹೀಗಾಗಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.

ಮೊಬೈಲ್ ಬಳಕೆ ಬೇಡ ಅಂದಿದ್ದಕ್ಕೆ ಏನ್ ಮಗು ಹೀಗಾ ಮಾಡೋದು!

ಚೆನ್ನೈ : ಮೊಬೈಲ್ ಬಳಸುವ ಬಗ್ಗೆ ಬುದ್ಧಿವಾದ ಹೇಳಿದ್ದಕ್ಕೆ 16 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.