ಹರಿಯಾಣ : ನಡು ರಸ್ತೆಯಲ್ಲಿಯೇ ಯುವತಿಯ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.

ಈ ಘಟನೆ ಹರಿಯಾಣದ ಫರೀದಾಬಾದ್ ನಲ್ಲಿ ನಡೆದಿದೆ. 21 ವರ್ಷದ ನಿಖಿತಾ ಎಂಬ ಯುವತಿ, ತನ್ನ ಸ್ನೇಹಿತೆಯೊಂದಿಗೆ ತೆರಳುತ್ತಿದ್ದಳು. ಈ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹೀಗಾಗಿ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಈ ವಿದ್ಯಾರ್ಥಿನಿ ಅಗರ್‌ ವಾಲ್‌ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ಓದುತ್ತಿದ್ದಳು.

ಆದರೆ, ಈ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಜನ ಸಂದಣಿಯ ಪ್ರದೇಶದಲ್ಲಿಯೇ ಗುಂಡಿನ ದಾಳಿ ನಡೆದಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿವೆ.
ಮೂಲಗಳಂತೆ ಯುವತಿಯನ್ನು ಕಿಡ್ನ್ಯಾಪ್ ಮಾಡಲು ಪಾಪಿಗಳು ಪ್ಲಾನ್ ಮಾಡಿದ್ದರು. ಹೀಗಾಗಿ ಅವಳನ್ನು ಕಾರಿನಲ್ಲಿ ತಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಯುವತಿ ತಪ್ಪಿಸಿಕೊಂಡಿದ್ದಾಳೆ. ಇದರಿಂದ ಕೋಪಗೊಂಡ ಪಾಪಿಗಳು, ಗುಂಡು ಹಾರಿಸಿದ್ದಾರೆ.

ಆರೋಪಿಗಳ ಪೈಕಿ ಓರ್ವನನ್ನು ಸೊಹ್ನಾ ಮೂಲದ ತೌಸಿಫ್‌ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಈ ಹಿಂದೆ ಯುವತಿಗೆ ಕಿರುಕುಳ ನೀಡಿದ್ದ. ಈ ಕುರಿತು ದೂರು ಕೂಡ ದಾಖಲಾಗಿದ್ದು, ರಾಜಿಯ ನಂತರ ಪ್ರಕರಣ ಹಿಂಪಡೆಯಲಾಗಿತ್ತು ಎಂದು ಬಲ್ಲಾಬ್‌ ಗರ್ ಎಸಿಪಿ ಜೈವೀರ್ ರಥಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜನರಿಗೆ ‘ಕೈ’ ಕೊಡುವುದರಲ್ಲಿ ಕಾಂಗ್ರೆಸ್ ಸಿದ್ಧಹಸ್ತ : ಸಿಎಂ

ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು…

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಗಸ್ಟ್ 10 ರಂದು ಅದ್ದೂರಿ ಬಾಬಾ ಲಖಿ ಶಾ ಬಂಜಾರ ಜಯಂತಿ

ಉತ್ತರಪ್ರಭ ದೆಹಲಿ: ಆಗಸ್ಟ್ 10 ರಂದು ದೆಹಲಿಯಲ್ಲಿ ಅದ್ದೂರಿ ಬಾಬಾ ಲಖಿ ಶಾ ಜಯಂತಿ ಆಚರಣೆ.…

ಜೈಲಿಗೆ ಪತಿ ಹೋದಾಗ, ಪತ್ನಿ ಮಾಡಿದ್ದೇನು? ಹೊರ ಬಂದಾಗ ಗಂಡನೂ ಮಾಡಿದ್ದೇನು?

ಲಕ್ನೋ : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿ, ತನ್ನ ಅಣ್ಣನನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.

ನಾಲ್ಕ ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ!

ನವದೆಹಲಿ : ನಾಲ್ಕು ಚಕ್ರದ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.