ಬೆಂಗಳೂರು : ಇಲ್ಲಿಯ ಬಸವನಪುರ ವಾರ್ಡ್ ನ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ 9ಕ್ಕೆ ಸುಮಾರಿಗೆ ಮನೆಯ ಕೋಣೆಯಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಜಯಪ್ರಕಾಶ್ ಅವರ ಪತ್ನಿ ವಿನೋದಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಕೆ.ಆರ್. ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ವಿನೋದಾ ಅವರನ್ನು ಕೂಡಲೇ ಕುಟುಂಬಸ್ಥರು ಭಟ್ಟರಹಳ್ಳಿಯ ಸತ್ಯಸಾಯಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ವಿನೋದಾ ಅವರು ಇತ್ತೀಚೆಗಷ್ಟೇ ಅಪೆಂಡಿಕ್ಸ್ ಆಪರೇಷನ್ ಗೆ ಒಳಗಾಗಿದ್ದರು. ದಂಪತಿಗೆ ಮೂರು ವರ್ಷದ ಮಗುವಿದ್ದು, ಮಾಜಿ ಕಾರ್ಪೋರೇಟರ್ ಆಗಿರುವ ಜಯಪ್ರಕಾಶ್ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರ ಆಪ್ತರಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಗಾಂಜಾ ಬೆಳೆ:ಒರ್ವನ ಬಂಧನ

ಪಟ್ಟಣದ ಯಲಿಶಿರೂರ ರಸ್ತೆಯ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಓರ್ವನನ್ನು ಪೋಲಿಸರು ಬಂಧಿಸಿದ್ದಾರೆ.

ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಸ್ವಯಂ ನಿವೃತ್ತಿಗೆ ಆದೇಶ

ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ದೈಹಿಕವಾಗಿ ಅಸಮರ್ಥಗೊಂಡ ನಿಗಮದ ಅಧಿಕಾರಿಗಳು/ನೌಕರರಿಗೆ ಅನ್ವಯವಾಗುವಂತೆ ಆಕರ್ಶಣೀಯ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ.

ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9150…

ರಾಜ್ಯದಲ್ಲಿ 18 ಭ್ರಷ್ಟರ ಬೇಟೆಯಾಡಿದ ಎಸಿಬಿ: ಗದುಗಿನ ಬಸವಕುಮಾರ್ ಅಣ್ಣಿಗೇರಿಗೆ ಬಿಗ್ ಶಾಕ್

ಉತ್ತರಪ್ರಭರಾಜ್ಯ: ಇಂದು ರಾಜ್ಯಾದ್ಯಂತ ಭ್ರಷ್ಟರ ವಿರುದ್ಧ ಎಸಿಬಿ ದಾಳಿ ನಡೆಸಿದ್ದು, ಹಲವು ಇಲಾಖೆಗಳ 18 ಅಧಿಕಾರಿಗಳ…