ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮುಗಿ ಬಿದ್ದಿರುವುದಕ್ಕೆ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರು ಕಟ್ಟಿದ ಪಕ್ಷದಲ್ಲಿ ಅವರು ಎಲ್ಲಿದ್ದಾರೆ ಎಂದು ಬೂತ ಕನ್ನಡಿ ಹಾಕಿ ಹುಡುಕಾಡುವ ಕಾಲ ಬಂದಿದೆ. ಅಲ್ಲದೇ, ರಾಜ್ಯದಲ್ಲಿ ಯಡಿಯೂರಪ್ಪ ಅವರು ಕಟ್ಟಿದ ಬಿಜೆಪಿ ಪಕ್ಷದಲ್ಲಿ ಅವರನ್ನೇ ಹೊರ ಹಾಕುವ ಹುನ್ನಾರ ನಡೆದಿದೆ. ಯಡಿಯೂರಪ್ಪ ಅವರನ್ನೇ ಓಡಿಸಿ, ಆ ನಂತರ ಸೋತು ಸುಣ್ಣವಾಗಿ ಮತ್ತೆ ಯಡಿಯೂರಪ್ಪ ಅವರನ್ನು ಈ ಪಕ್ಷದವರು ಕರೆ ತಂದಿದ್ದರು. ಈಗಲೂ ಅದೇ ಕೆಲಸ ಮುಂದುವರೆಸಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಪಕ್ಷ ಬೆಳೆಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೇರಿದಂತೆ ಸಾಕಷ್ಟು ನಾಯಕರು ಶ್ರಮಿಸಿದ್ದಾರೆ. ಎಲ್ಲರಿಗಿಂತಲೂ ಹೆಚ್ಚಾಗಿ ಪಕ್ಷ ಬೆಳೆಸಿದ್ದರ ವಿಷಯ ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಮಾಹಿತಿ ಕೊರತೆ ಇದ್ದವರು ಅವರನ್ನೇ ಕೇಳಿ ತಿಳಿದುಕೊಳ್ಳಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರು ಹಣಕಾಸು ನಿರ್ವಹಣೆಯಲ್ಲಿ ನಿಪುಣರಾಗಿದ್ದಾರೆ. ಅವರು ಮಾಡಿದ ಜನಪರ ಆಡಳಿತ ಹಾಗೂ ಮಾಡಿರುವ ಕೆಲಸಗಳನ್ನು ಮಾಡುವುದಿರಲಿ, ಊಹಿಸಲೂ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇತ್ತಿಚೆಗೆ ಟ್ವೀಟ್ ಮಾಡಿದ್ದ ಬಿಜೆಪಿ, ದೇವೇಗೌಡರು ಬೆಳೆಸಿದ ಜೆಡಿಎಸ್ನಲ್ಲಿ ಸ್ಥಾನಮಾನ ಅನುಭವಿಸಿದಿರಿ. ಪರಮೇಶ್ವರ್ ಅವರು ಬೆಳೆಸಿದ ಕಾಂಗ್ರೆಸ್ ನಲ್ಲಿ ಸಿಎಂ ಆದಿರಿ. ಡಿಕೆಶಿ ಕಟ್ಟುತ್ತಿರುವ ಪಕ್ಷದಲ್ಲಿ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದೀರಿ, ಕಾಗೆ ಕಟ್ಟಿದ ಗೂಡಿನಲ್ಲಿ ಮೊಟ್ಟೆ ಇಡಲು ಹವಣಿಸುವ ಕೋಗಿಲೆಯ ಬುದ್ಧಿ ಏಕೆ? ಮಾನ್ಯ ಸಿದ್ದರಾಮಯ್ಯ ಅವರೇ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.

Leave a Reply

Your email address will not be published. Required fields are marked *

You May Also Like

ಸೋನಿಯಾ ವಿರುದ್ಧ ಕೇಸ್ ಬಿಡಲು ಸಿಎಂ ಸಿದ್ಧ: ಬಿಜೆಪಿ ವಿರೋಧ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ಕೈಬಿಡಲು ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದು,

ನಾಳೆಯಿಂದ ರಾಜ್ಯದಲ್ಲಿ ಬಸ್ ಸಂಚಾರ?: ನಿಯಮಗಳೇನು ಗೊತ್ತಾ?

ಬೆಂಗಳೂರು: ಲಾಕ್ ಡೌನ್ ನಿಂದ ಬಸ್ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ನಾಳೆಯಿಂದ ಮತ್ತೆ ಬಸ್…

ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರ ಶಾಸಕ ಎಚ್ಕೆ ಪಾಟೀಲ್ ಪತ್ರ

ವೈದ್ಯಕೀಯ ಉಪಕರಣಗಳ ಖರೀದಿ ಸಮಯದಲ್ಲಿ ನಡೆದಿರಬಹುದಾದಂತಹ ಅವ್ಯವಹಾರದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಶಾಸಕ ಎಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ.

ಕಾರ್ಮಿಕರ ಮುಷ್ಕರ ಹಿನ್ನೆಲೆ ಲಕ್ಷ್ಮೇಶ್ವರದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೊಧ ನೀತಿ ಖಂಡಿಸಿ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿವಿಧ ಕಾರ್ಮಿಕ ಹಾಗೂ ರೈತಪರ ಮತ್ತು ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.