ಮೈಸೂರು : ಎರಡು ತಲೆ ಹಾವಿನೊಂದಿಗೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ದೊಡ್ಡಯ್ಯ, ಹೇಮಂತ್, ಯೋಗೇಶ್, ರವಿ ಮತ್ತು ಭರಮಗೌಡ ಬಂಧಿತ ಆರೋಪಿಗಳು. ಅರಣ್ಯ ಅಧಿಕಾರಿಗಳು ಶುಕ್ರವಾರ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಹಾವನ್ನು ಕಾರಿನಲ್ಲಿ ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಇಲಾಖೆ ಸಿಬ್ಬಂದಿ, ಸಿದ್ದಲಿಂಗಪುರ ಬಳಿ ಕಾರನ್ನು ತಡೆದು ಸರೀಸೃಪ ವಶಪಡಿಸಿಕೊಂಡಿದ್ದಾಗಿ ಡಿಸಿಎಫ್ ಪೂವಯ್ಯ ಹೇಳಿದ್ದಾರೆ.

ಬೆಂಗಳೂರಿನಿಂದ ಮೈಸೂರಿಗೆ ಸಾಗಾಣಿಕೆ ಮಾಡುತ್ತಿದ್ದ ಮಣ್ಣುಮುಕ್ಕ ಹಾವನ್ನು ರಕ್ಷಿಸಿರುವ ಅರಣ್ಯ ಸಂಚಾರಿ ದಳದ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಹಾವನ್ನು ಮನೆಯಲ್ಲಿ ಇಟ್ಟುಕೊಂಡರೆ ಕೋಟ್ಯಾಧಿಪತಿಗಳಾಗಬಹುದೆಂದು ದುಷ್ಕರ್ಮಿಗಳು ಸುಳ್ಳು ಸುದ್ದಿ ಹಬ್ಬಿಸಿ, ಮಣ್ಣುಮುಕ್ಕ ಹಾವನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಕೊಡಗಾನೂರ ವೀರಭದ್ರೇಶ್ವರ ರಥೋತ್ಸವ

ಸಮೀಪದ ಕೊಡಗಾನೂರ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಭಕ್ತರ ಹರ್ಷೊದ್ಘಾರದ ಮಧ್ಯೆ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು.

ಆರೋಗ್ಯ ಸಚಿವರಿಂದಲೇ ಲಾಕ್ ಡೌನ್ ಉಲ್ಲಂಘನೆ: ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ…?

ಕೋರೋನಾ ಲಾಕ್ ಡೌನ್ ನಡುವೆಯೇ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೇ ಲಾಕ್ ಡೌನ್ ಉಲ್ಲಂಘನೆ ಆರೋಪಕ್ಕೆ ಗುರಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ತಾವು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ಜನರು ಸೇರಿ ಸಚಿವ ಶ್ರೀರಾಮುಲು ಅವರಿಗೆ ಹೂಮಳೆ ಗೈದಿದ್ದಾರೆ.

ವಿರಾಟ್ ಕೊಹ್ಲಿ ಬಗ್ಗೆ ಕೋಚ್ ಹೇಳಿದ್ದೇನು?

ಮುಂಬಯಿ : ಭಾರತ ತಂಡದ ನಾಯಕ ವಿರಾಟ್ ಪರಿಸ್ಥಿತಿಗೆ ತಕ್ಕಂತೆ ತಮ್ಮ ಆಟ ಬದಲಾಯಿಸುತ್ತಾರೆ. ಇದೇ…

7 ದಿನಗಳಿಂದ ಗ್ರಾ.ಪಂ ನೌಕರರ ಕಾರ್ಯ ಸ್ಥಗಿತ ; ಸಾರ್ವಜನಿಕರಿಗೆ ಪರದಾಟ ; ಧರಣಿ ‘ಕೈ’ ಬಿಡದ ಗ್ರಾ.ಪಂ ಒಕ್ಕೂಟ..!

ಉತ್ತರಪ್ರಭ ಗದಗ :ಕಳೆದ 7 ದಿನಗಳಿಂದ ರಾಜ್ಯಾದ್ಯಂತ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತನ…