ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಇಲ್ಲಿಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ವೃತ್ತದಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಬಹಿಷ್ಕರಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ್ದರು. ಈ ಸಂದರ್ಭದಲ್ಲಿ ಹತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಲ್ಯಾಣ ಕರ್ನಾಟಕ ಆರಂಭದಿಂದಲೂ ಯಾವುದೇ ಸರ್ಕಾರ, ಅಸ್ತಿತ್ವಕ್ಕೆ ಬಂದರೂ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ಇಲ್ಲಿಯವರೆಗೂ ಇಲ್ಲಿಯವರೇ ಸಚಿವರಾದರೂ ಈ ಭಾಗವನ್ನು ವಂಚಿಸುತ್ತಿದ್ದಾರೆ. ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಅನ್ಯಾಯದ ಮೇಲೆ ಅನ್ಯಾಯ ನಡೆಯುತ್ತಲೇ ಇದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ದೇವರಗುಡ್ಡದ ಕಾರ್ಣಿಕ: ವ್ಯಾದಿ ಬೂದಿ ಆದಿತಲೆ ಸೃಷ್ಟಿ ಸಿರಿ ಆದಿತಲೇ ಪರಾಕ್!

ರಾಣೆಬೆನ್ನೂರ ತಾಲೂಕಿನ ದೇವರಗುಡ್ಡದ ಕರಿಯಾಲದಲ್ಲಿ ವಿಜಯದಶಮಿ ಪ್ರಯುಕ್ತ ಶನಿವಾರ ಸಂಜೆ ನಡೆದ ಕಾರ್ಣಿಕದ ನುಡಿಗಳು. ದೇವರಗುಡ್ಡ ಗ್ರಾಮದ ಗೊರವಯ್ಯ ಕಾರ್ಣಿಕ ನುಡಿದರು.

ಇಂದು ಕೂಡ ಶತಕ ಬಾರಿಸಿದ ಸೋಂಕಿತರ ಸಂಖ್ಯೆ!: ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು..?

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ಶತಕ ಬಾರಿಸಿದೆ. ಇಂದು ಬರೋಬ್ಬರಿ 122…

ಶಾಲೆ ತೆರೆಯಬಾರದು ಎನ್ನುವುದಕ್ಕೆ ಸಿದ್ದರಾಮಯ್ಯ ಕೊಟ್ಟ ಉತ್ತರವೇನು ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ತಲೆ ಹಾವು ವಶಕ್ಕೆ – ಐವರ ಬಂಧನ!

ಮೈಸೂರು : ಎರಡು ತಲೆ ಹಾವಿನೊಂದಿಗೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.