ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಇಲ್ಲಿಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ವೃತ್ತದಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಬಹಿಷ್ಕರಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ್ದರು. ಈ ಸಂದರ್ಭದಲ್ಲಿ ಹತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಲ್ಯಾಣ ಕರ್ನಾಟಕ ಆರಂಭದಿಂದಲೂ ಯಾವುದೇ ಸರ್ಕಾರ, ಅಸ್ತಿತ್ವಕ್ಕೆ ಬಂದರೂ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ಇಲ್ಲಿಯವರೆಗೂ ಇಲ್ಲಿಯವರೇ ಸಚಿವರಾದರೂ ಈ ಭಾಗವನ್ನು ವಂಚಿಸುತ್ತಿದ್ದಾರೆ. ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಅನ್ಯಾಯದ ಮೇಲೆ ಅನ್ಯಾಯ ನಡೆಯುತ್ತಲೇ ಇದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ನರೇಗಲ್ಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರಿದ್ದು ಇದರಿಂದ ಬಡ ಹಾಗೂ ಮಧ್ಯಮ ವರ್ಗದವರ ಬದುಕು ಬೀದಿಗೆ ಬರುತ್ತದೆ ಎಂದು ಕರವೇ ಜಿಲ್ಲಾ ಅಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.

ನಭಾಪುರ ತಾಂಡಾದಲ್ಲಿ ಆಕಸ್ಮಿಕ ಬೆಂಕಿಗೆ 5 ಎಕರೆ ಕಬ್ಬು ಸುಟ್ಟು ಭಸ್ಮ

ಉತ್ತರಪ್ರಭಗದಗ: ತಾಲೂಕಿನ ನಭಾಪೂರ ತಾಂಡಾದ ರೈತ ರುಪಣ್ಣ ಸೋಮಪ್ಪ ಲಮಾಣಿಯವರ ಹೋಲದಲ್ಲೊ ಹೊಲದಲ್ಲಿ ಬೆಳೆದಿದ್ದ ಕಬ್ಬು…

ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ 6 ತಿಂಗಳ ಕೋವಿಡ್ ರಿಸ್ಕ್ ಭತ್ಯೆ

ಬೆಂಗಳೂರು: ಕೊರೋನಾ 2ನೇ ಅಲೆಯ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮೊದಲ ಅಲೆಯಲ್ಲಿ ನೀಡಲಾಗಿದ್ದ ಕೋವಿಡ್ ರಿಸ್ಕ್ ಭತ್ಯೆಯನ್ನು ನಿಲ್ಲಿಸಲಾಗಿತ್ತು. ಆದರೆ ಇದೀಗ ಮತ್ತೆ ಸರ್ಕಾರ ಕೋವಿಡ್ ರಿಸ್ಕ್ ಭತ್ಯೆಯನ್ನು ಆರು ತಿಂಗಳ ಕಾಲ ನೀಡಲು ಮುಂದಾಗಿದೆ.

0% ಲವ್ ಚಿತ್ರದ ಅಭಿರಾಮ್ ಹಿಂಬಾಲಿಸಿದ ಮಂಜುನಾಥ್

ಬೆಂಗಳೂರು: ಕೊರೊನಾ ವೈರಸ್ ಎರಡನೇ ಅಲೆಗೆ ಸ್ಯಾಂಡಲ್ವುಡ್ನ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಸ್ಯಾಂಡಲ್ವುಡ್ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್.ಮಂಜುನಾಥ್ ಏಪ್ರಿಲ್ ತಿಂಗಳಲ್ಲಿ ಮೃತಪಟ್ಟಿದ್ದರು. ಈಗ ಇವರು ನಿರ್ಮಾಣ ಮಾಡಿದ ಎರಡು ಚಿತ್ರಗಳ ನಿರ್ದೇಶಕ ಅಭಿರಾಮ್ ಕೊವಿಡ್ನಿಂದ ಮೃತಪಟ್ಟಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು.